ಉತ್ತರ ಕರ್ನಾಟಕದಲ್ಲಿ ಇಂದು ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮುಂದಿನ 24 ಘಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗ ಘಂಟೆಗೆ 30- 40 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ (ಸೆ. 27 ರ ಬೆಳಗ್ಗೆ ವರೆಗೆ ) ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು(ಸೆ.26): ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು(ಮಂಗಳವಾರ) (ಸೆ.26) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ಮತ್ತು 30ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ 24 ಘಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗ ಘಂಟೆಗೆ 30- 40 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ (ಸೆ. 27 ರ ಬೆಳಗ್ಗೆ ವರೆಗೆ ) ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕೈಕೊಟ್ಟ ಮಳೆ: ಕಂಗೆಟ್ಟ ರೈತಾಪಿ ವರ್ಗ
ಸೆ.29ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಸೆ.30ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಮಳೆ, ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.