ಜುಲೈ 15 ಮತ್ತೆ 16 ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಒಟ್ಟು ಆರು ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ ಹವಾಮಾನ ಇಲಾಖೆ 

ಬೆಂಗಳೂರು(ಜು.14): ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. 

ಜುಲೈ 15 ಮತ್ತೆ 16 ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಒಟ್ಟು ಆರು ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ: ಅಂತೂ ಮಳೆ ಬಂತು, ನಿಟ್ಟುಸಿರು ಬಿಟ್ಟ ಅನ್ನದಾತ...!

ಕೊಲ್ಲೂರಲ್ಲಿ ಗರಿಷ್ಠ 18 ಸೆಂ.ಮೀ. ಮಳೆ:

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿಯ ಕೊಲ್ಲೂರಿನಲ್ಲಿ ಅತಿ ಹೆಚ್ಚು 18 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರದಲ್ಲಿ 17, ಗೇರುಸೊಪ್ಪದಲ್ಲಿ 13, ಮಂಕಿಯಲ್ಲಿ 12, ಕದ್ರಾ, ಕೋಟಾದಲ್ಲಿ ತಲಾ 10, ಪಣಂಬೂರು 9 ಸೆಂ.ಮೀ ಮಳೆಯಾಗಿದೆ.