*  ಕರಾವಳಿ, ಮಲೆನಾಡಿನಲ್ಲಿ ಹೆಚ್ಚಿನ ಮಳೆ ನಿರೀಕ್ಷೆ* ಆಗಸ್ಟ್‌ 31ರಂದು ಮಳೆ ಮತ್ತಷ್ಟು ಚುರುಕು * ಹವಾಮಾನ ಇಲಾಖೆ ಮುನ್ಸೂಚನೆ 

ಬೆಂಗಳೂರು(ಆ.29): ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಆಗಸ್ಟ್‌ 29ರಿಂದ ಮೂರು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Add Asianetnews Kannada as a Preferred SourcegooglePreferred

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಲೆನಾಸಡು ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ ಎಂದು ಇಲಾಖೆಯ ನಿರ್ದೇಶಕ ಬಿ.ಎಸ್‌.ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಆಗಸ್ಟ್‌ 31ರಂದು ‘ಯಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆ ನಿರೀಕ್ಷೆಯಿದ್ದು, ಆ.29 ಹಾಗೂ 30ರಂದು ‘ಯಲ್ಲೊ ಅರ್ಲಟ್‌’ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದ್ದಾರೆ.

ನಂದಿ ಬೆಟ್ಟ ಮಾರ್ಗದಲ್ಲಿ ಭಾರಿ ಭೂ ಕುಸಿತ : ಸಂಚಾರ ಸಂಪೂರ್ಣ ಬಂದ್

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆ ನಿರೀಕ್ಷೆಯಿದೆ. ಆಗಸ್ಟ್‌ 31ರಂದು ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಪಾಟೀಲ್‌ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಉಡುಪಿಯ ಬ್ರಹ್ಮಾವರದಲ್ಲಿ 13 ಸೆಂಮೀ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 10, ಶಿವಮೊಗ್ಗದ ಆಗುಂಬೆಯಲ್ಲಿ 10, ಉಡುಪಿಯ ಕಾರ್ಕಳ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 7 ಸೇ.ಮೀ ಮಳೆಯಾಗಿರುವುದಾಗಿ ಅವರು ತಿಳಿಸಿದ್ದಾರೆ.