ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದ್ದು, ಏ.22ರವರೆಗೆ ಮಳೆಯಾಗಲಿದೆ. ಗಾಳಿ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಅದರಲ್ಲೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಏ.20ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು(ಏ.19): ಮುಂದಿನ ನಾಲ್ಕೈದು ದಿನ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದ್ದು, ಏ.22ರವರೆಗೆ ಮಳೆಯಾಗಲಿದೆ. ಗಾಳಿ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಅದರಲ್ಲೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಏ.20ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

Chikkamagaluru: ಮಲೆನಾಡಿನಲ್ಲಿ ಸುರಿದ ಮಳೆ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು

ಮಳೆಯ ಜತೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಉಷ್ಣಾಂಶ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕಲಬುರಗಿಯಲ್ಲಿ ಅತಿ ಹೆಚ್ಚು 41.4 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 41, ಬಾಗಲಕೋಟೆ 40.3, ಕೊಪ್ಪಳ 40.1, ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಶಿಯಸ್‌ ತಾಪಮಾನ ದಾಖಲಾಗಿದೆ.