ಇಂದು ಮತ್ತು ನಾಳೆ ಕರಾವಳಿಯ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.
ಬೆಂಗಳೂರು(ಜು.11): ರಾಜ್ಯದಲ್ಲಿ ಇಂದು(ಮಂಗಳವಾರ) ಮತ್ತು ನಾಳೆ(ಬುಧವಾರ) ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಕರಾವಳಿಯ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬತ್ತಿದ ಜಲಾಶಯದೊಳಗಿಂದ ಎದ್ದು ಬಂದಿವೆ ಸಾವಿರದ ಕಥೆಗಳು!
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಮೀ ಇರಲಿದ್ದು, ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಇರಲಿದ್ದು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
