ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ನವಲಗುಂದ ತಾಲೂಕಿನಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಧಾರವಾಡ-ವಿಜಯಪುರ ಹೆದ್ದಾರಿಯು ಒಂದು ಘಂಟೆಗೂ ಹೆಚ್ಚು ಕಾಲ ಬಂದ್ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾಡಳಿತವು ರೆಡ್ ಅಲರ್ಟ್ ಘೋಷಿಸಿದೆ.

ಧಾರವಾಡ (ಜೂ.11): ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಆರಂಭವಾಗಿದ್ದು, ನವಲಗುಂದ ತಾಲೂಕಿನಲ್ಲಿ ಗುಡುಗು ಸಹಿತ ತೀವ್ರ ಮಳೆ ಸುರಿಯುತ್ತಿದೆ. ಈ ಭಾರೀ ಮಳೆಯಿಂದ ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ಒಂದು ಘಂಟೆಗೂ ಹೆಚ್ಚು ಕಾಲ ಬಂದ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆಗಳಿಗೆ ನುಗ್ಗಿದ ಮಳೆನೀರು:

ನವಲಗುಂದ ತಾಲೂಕಿನ ಯಮನೂರು, ಅರೆ ಕುರಹಟ್ಟಿ, ಮತ್ತು ಹಣಸಿ ಗ್ರಾಮಗಳ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮನೆಗಳಿಂದ ನೀರನ್ನು ಹೊರತೆಗೆಯಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಏಕಾಎಕಿ ಸುರಿದ ಮಳೆಯಿಂದ ಜನರು ನಲುಗಿದ್ದಾರೆ.

ಜಿಲ್ಲಾಡಳಿತವು ಬೆಣ್ಣಿ ಹಳ್ಳ ಮತ್ತು ತುಪರಿ ಹಳ್ಳ ಗ್ರಾಮಗಳಿಗೆ ಅಲರ್ಟ್ ಘೋಷಿಸಿ, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಕಷ್ಟದಲ್ಲಿದ್ದಾರೆ.

ಇದನ್ನೂ ಓದಿ: Karnataka Rains: ಉಡುಪಿ ಜಿಲ್ಲೆಗೆ ನಾಳೆ ರೆಡ್‌ ಅಲರ್ಟ್; ಶಾಲೆಗಳಿಗೆ ರಜೆ ಘೋಷಣೆ!

ರೆಡ್ ಅಲರ್ಟ್ ಘೋಷಣೆ: ನಾಳೆ ಧಾರವಾಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಳೆರಾಯನ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಜನರು ಎಚ್ಚರಿಕೆಯಿಂದ ಇರಲು ಕೋರಲಾಗಿದೆ. ಅಪ್ಡೇಟ್‌ಗಾಗಿ ಸಂಪರ್ಕದಲ್ಲಿರಿ.