ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಡಿಸೆಂಬರ್ 03ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು: ಅಡಿಕೆ ಹಾಗೂ ಭತ್ತ ಬೆಳೆ ಕಟಾವಿಗೆ ಬಂದಿರುವ ಹೊಸ್ತಿಲಲ್ಲೇ ಇದೀಗ ಮತ್ತೆ ಮಳೆ ಭೀತಿ ಎದುರಾಗಿದೆ. ಮುಂದಿನ ಎರಡು ವಾರಗಳ ಕಾಲ ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಸಿದೆ. 

ರಾಜ್ಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದಿನಿಂದ ಡಿಸೆಂಬರ್ 03ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜ ನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕೋಟಿ ಕೋಟಿ ಹಣ ಉಳಿಸಲು ಬೆಂಗಳೂರಿನಲ್ಲಿನ ಪ್ರಧಾನ ಕಚೇರಿ ಸ್ಥಳಾಂತರಿಸಲು ಮುಂದಾದ 5000 ಉದ್ಯೋಗಿಗಳ ಕಂಪನಿ

Scroll to load tweet…

ಇನ್ನು ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಮೂರು ದಿನಗಳಿಂದ ತುಂತುರು ಮಳೆ ಸುರಿದಿದ್ದು, ಸದ್ಯ ಮೋಡ ಕವಿದ ವಾತಾವರಣವಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ. 

ವಾಟ್ಸಾಪ್‌ನಲ್ಲಿ ರೈತರು 'Hi' ಅಂದ್ರೆ ಸಾಕು, ಧಾನ್ಯ ಖರೀದಿ ಚಕಚಕ

ಬಹುತೇಕ ಜಲಾಶಯಗಳು ಭರ್ತಿ: ಈ ಬಾರಿ ಮುಂಗಾರು ಮಳೆಯ ಉತ್ತಮವಾಗಿ ಸುರಿದಿರುವುದರಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಬಹುತೇಕ ಜಿಲ್ಲೆಗಳ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ರಾಜ್ಯದ ಪ್ರಮುಖ ಜಲಾಶಯಗಳಾದ ಕೃಷ್ಣರಾಜ ಸಾಗರ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಘಟಪ್ರಭಾ, ಭದ್ರಾ, ಹಾರಂಗಿ, ಹೇಮಾವತಿ ಸೇರಿದಂತೆ ಬಹುತೇಕ ಜಲಾಶಯಗಳು ಭರ್ತಿಯಾಗಿವೆ.