Asianet Suvarna News Asianet Suvarna News

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆ ನೀಡಿದ ಹವಮಾನ ಇಲಾಖೆ!

ಮುಂದಿನ 48 ಗಂಟೆಯೊಳಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರ್ಗಿ, ಬಳ್ಳಾರಿ, ಧಾರವಾಡ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದ್ದು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rains in karnataka weather forecast by  department of Meteorology today rav
Author
First Published May 31, 2023, 5:34 PM IST

ದಕ್ಷಿಣ ಕನ್ನಡ (ಮೇ.31) : ಮುಂದಿನ 48 ಗಂಟೆಯೊಳಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರ್ಗಿ, ಬಳ್ಳಾರಿ, ಧಾರವಾಡ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದ್ದು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಲಿದ್ದು, ಘಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. 

ಸಿಡಿಲು-ಮಳೆ ಆರ್ಭಟ, ಅಥಣಿಯಲ್ಲಿ ಇಬ್ಬರ ಸಾವು; ನಾಳೆ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಭಾರೀ ಮಳೆಯಾಗುವ ಸಾದ್ಯತೆ ಹಿನ್ನೆಲೆ ಜನರು ಅನಗತ್ಯ ಪ್ರಯಾಣ ತಪ್ಪಿಸಬೇಕು, ಪ್ರಯಾಣವೇಳೆ ಎಚ್ಚರಿಕೆಯಿಂದ ಚಾಲನೆ ಮಾಡಬೇಕು, ಆದಷ್ಟು ಸುರಕ್ಷಿತ ಆಶ್ರಯ ಪಡೆಯಿರಿ. ಬಿರುಗಾಳಿ ಸಹಿತ ಮಳೆ ಬೀಳುವಾಗ ಹೊರಗಡೆ ನಿಲ್ಲುವುದು ಬೇಡ ಮನೆಯೊಳಗೆ ಇರುವಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಬರುವ ವೇಳೆ ಕಿಟಕಿ ಬಾಗಿಲುಗಳನ್ನು ಮುಚ್ಚುಬೇಕು. ಕಾಂಕ್ರೀಟ್ ಗೋಡೆಗಳಿಗೆ ಒರಗದಂತೆ. ಗುಡುಗು ಸಿಡಿಲು ಸಹಿತ ಮಳೆಯಾಗುವ ವೇಳೆ ವಿದ್ಯುತ್‌ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್‌ಪ್ಲಗ್ ಮಾಡುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ವಿರಾಜಪೇಟೆ ವ್ಯಾಪ್ತಿಯಲ್ಲಿ ಭಾರಿ ಮಳೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದೆ. ಗಾಳಿ ಸಹಿತ ಸುರಿದ ಮಳೆಗೆ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಸಿಡಿಲಿಗೆ ಮೂವರು ಬಲಿ

ವಿರಾಜಪೇಟೆ-ಅಮ್ಮತ್ತಿ ರಸ್ತೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಬಂದ್‌ ಆಗಿತ್ತು. ರಸ್ತೆಯ ಅಡ್ಡಲಾಗಿ ವಿದ್ಯುತ್‌ ಕಂಬಗಳು ಕೂಡ ಧರೆಗುರುಳಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇದರಿಂದ ವಿದ್ಯುತ್‌ ವ್ಯತ್ಯಯ ಕೂಡ ಉಂಟಾಗಿದೆ. ವಿರಾಜಪೇಟೆ, ಮಗ್ಗುಲ ಅಮ್ಮತ್ತಿ ಸುತ್ತಮುತ್ತ ಸುರಿದ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

Follow Us:
Download App:
  • android
  • ios