Asianet Suvarna News Asianet Suvarna News

ಸಿಎಂ ಸಭೆಯಲ್ಲಿ ತೆಗೆದುಕೊಂಡ‌ ಪ್ರಮುಖ ನಿರ್ಧಾರಗಳು..!

* ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ
* ಲಾಕ್ ಡೌನ್ ಜಾರಿಯಾದ ನಂತರ ವ್ಯಕ್ತವಾಗಿರುವ ಪ್ರತಿಕ್ರಿಯೆ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ
* ಸಿಎಂ ಸಭೆಯಲ್ಲಿ ತೆಗೆದುಕೊಂಡ‌ ಪ್ರಮುಖ ನಿರ್ಧಾರಗಳು

Here Is CM BSY Meeting highlights about Coronavirus rbj
Author
Bengaluru, First Published May 10, 2021, 11:18 PM IST

ಬೆಂಗಳೂರು, (ಮೇ.10): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಸೋಮವಾರ) ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದರು.

 ಈ ವೇಳೆ ಕೋವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕೊಂಚ ಬದಲಾವಣೆ: ವಾಹನ ಬಳಕೆಗೆ ಷರತ್ತುಬದ್ಧ ಅನುಮತಿ

ಸಿಎಂ ಸಭೆಯ ಹೈಲೈಟ್ಸ್..

* ಪ್ರಮುಖವಾಗಿ ಕಟ್ಟುನಿಟ್ಟಿನ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು ಜನರು ಅನಗತ್ಯವಾಗಿ ಓಡಾಡುವುದನ್ನು‌ ತಪ್ಪಿಸಬೇಕು.
*ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಎಂದರು.

*ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು ಅಲ್ಲದೆ ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಬೇಕು.

* ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು.
* ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆ ಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಾನೆ ಕೆಲಸ ಶುರು ಮಾಡಲು ಸೂಚಿಸಲಾಯಿತು.

* 3 ನೇ‌ ಅಲೆಗೆ ಈಗಿನಿಂದಾನೆ ಸಿದ್ದರಾಗಬೇಕಿದ್ದು ಅದಕ್ಕೊಂದು‌ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚಿಸಲಾಯಿತು.
ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ‌ ಜಿಲ್ಲೆಗಳ ಕರೋನ‌ ಪರಿಸ್ಥಿತಿ ಹತೋಟಿಗೆ ತರಲು‌ ಶ್ರಮಿಸಬೇಕು ಎಂದು ಕರೆ ನೀಡಿದರು.
Here Is CM BSY Meeting highlights about Coronavirus rbjHere Is CM BSY Meeting highlights about Coronavirus rbj

Follow Us:
Download App:
  • android
  • ios