ರಾಜ್ಯದಲ್ಲಿ ಈವರೆಗೆ ಎಷ್ಟು ಬ್ಲ್ಯಾಕ್ ಫಂಗಸ್ ಕೇಸ್? ಎಷ್ಟುಸಾವು? ಗುಣಮುಖವೆಷ್ಟು?
* ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ
* ರಾಜ್ಯದಲ್ಲಿ ಈವರೆಗೆ ಬ್ಲ್ಯಾಕ್ ಫಂಗಸ್ ಕೇಸ್ ಎಷ್ಟಿವೆ?
*ಕಪ್ಪು ಶಿಲೀಂಧ್ರ ಸೋಂಕಿನಿಂದ ಎಷ್ಟುಸಾವು? ಗುಣಮುಖವೆಷ್ಟು?
ಬೆಂಗಳೂರು, (ಜೂನ್.05): ರಾಜ್ಯದ ಜನತೆಗೆ ಒಂದೆಡೆ ಕೊರೋನಾ ಆತಂಕ ಎದುರಾಗಿದ್ರೆ, ಮತ್ತೊಂದೆಡೆ ಬ್ಲ್ಯಾಕ್ ಫಂಗಸ್ ಭಯ ಹುಟ್ಟಿಸಿದೆ.
ಎಲ್ಲರಿಗೂ ಬರುವುದಿಲ್ಲ. ಕೊರೋನಾ ಸೋಂಕಿತರಿಗೆ, ಸೋಂಕಿನಿಂದ ಗುಣಮುಖರಾದವರಿಗೆ ಹೆಚ್ಚಾಗಿ ಈ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಇನ್ನು ರಾಜ್ಯದಲ್ಲಿ ಇದರ ಅಂಕಿ ಸಂಖ್ಯೆಯನ್ನು ಸ್ವತಃ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ರಾಜ್ಯದಲ್ಲಿ ಈವರೆಗೆ ಎಷ್ಟು ಬ್ಲ್ಯಾಕ್ ಫಂಗಸ್ ಕೇಸ್? ಎಷ್ಟುಸಾವು? ಗುಣಮುಖವೆಷ್ಟು? ಎನ್ನುವುದು ಈ ಕೆಳಗಿನಂತಿದೆ ನೋಡಿ.
ಕರ್ನಾಟಕದಲ್ಲಿ ಮತ್ತಷ್ಟು ತಗ್ಗಿದ ಕೊರೋನಾ, ಪಾಸಿಟಿವಿಟಿ ದರದಲ್ಲಿ ಭಾರೀ ಇಳಿಕೆ
ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಈಗಾಗಲೇ 62 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆದರೆ ದುರಾದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಸುಧಾಕರ್ ವಿವರಿಸಿದರು.
ಕಪ್ಪು ಶಿಲೀಂಧ್ರ ಸೋಂಕಿಗೆ ಅಂಪೊಟೆರಿಸಿನ್ ಬಿ ಔಷಧಿ ವೈಲ್ ಬೇಕಾಗುತ್ತದೆ. ಕೇಂದ್ರ ಸರ್ಕಾರವು 9,750 ವೈಲ್ ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಇದರಲ್ಲಿ 8,860 ವೈಲ್ ನಿನ್ನೆ ಬಂದಿದೆ. ಒಟ್ಟು 18,650 ವೈಲ್ ಗಳು ರಾಜ್ಯಕ್ಕೆ ದೊರೆತಿದೆ. ಸರ್ಕಾರಿ ಆಸ್ಪತ್ರೆಗಳಿಗೆ 8,860 ವೈಲ್ ಗಳನ್ನು ಬಳಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೇರಿ ಬೇರೆ ಕಡೆಗಳಿಗೆ 9,740 ವೈಲ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.