ಜೈಲಲ್ಲಿ ಕೊರೋನಾ ಮಾರ್ಗಸೂಚಿ ಪಾಲಿಸ್ತಿದ್ದೀರಾ? ಹೈಕೋರ್ಟ್‌

ಗೌರಿ ಹತ್ಯೆ ಆರೋಪಿ ಕಾಳೆ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್‌ ಆದೇಶ| ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಅಮೋಲ್‌ ಕಾಳೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ| ಕಾರಾಗೃಹಗಳಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ| 

High Court Asked to Government Did You Follow Corona Guidelines in Jail

ಬೆಂಗಳೂರು(ಅ.01):ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. 

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೊರೋನಾ ಸೋಂಕು ಹರಡುವಿಕೆ ತಡೆಯಲು ಅಗತ್ಯ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಅಮೋಲ್‌ ಕಾಳೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಈ ನಿರ್ದೇಶನ ನೀಡಿದೆ. 

ಕಾನೂನು ಶಾಲೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಿಲ್ಲ ಮೀಸಲು

ಬುಧವಾರ ನಡೆದ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ವಿಚಾರಣಾಧೀನ ಕೈದಿ ಅಮೋಲ್‌ ಕಾಳೆ ಆರೋಗ್ಯವಾಗಿ ಮತ್ತು ಸದೃಢವಾಗಿದ್ದಾನೆ. ಈವರೆಗೆ ಆತನಿಗೆ ಯಾವುದೇ ಅನಾರೋಗ್ಯವಿಲ್ಲ ಎಂದು ಮಾಹಿತಿ ನೀಡಿದರು. ಈ ಹಿಂದೆ ನಡೆಸಿದ್ದ ಆರೋಗ್ಯ ತಪಾಸಣೆಯ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಅಮೋಲ್‌ ಕಾಳೆಗೆ ಹೊಸದಾಗಿ ವೈದ್ಯಕೀಯ ಪರೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಕಾರಾಗೃಹಗಳಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ಅ.12ಕ್ಕೆ ವಿಚಾರಣೆ ಮುಂದೂಡಿತು.
 

Latest Videos
Follow Us:
Download App:
  • android
  • ios