Asianet Suvarna News Asianet Suvarna News

ಚಿತ್ತಾಪುರ ನಮೋ ಭಾರತ್ ಕಾರ್ಯಕ್ರಮ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್; ಚಕ್ರವರ್ತಿ ಸೂಲಿಬೆಲೆಗೂ ಪ್ರವೇಶ

ಚಿತ್ತಾಪುರದಲ್ಲಿ ಆಯೋಜನೆ ಮಾಡಲಾಗಿದ್ದ ನಮೋ ಭಾರತ್ ಕಾರ್ಯಕ್ರಮ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಹೈಕೋರ್ಟ್‌ನಿಂದ ತೆರವುಗೊಳಿಸಲಾಗಿದೆ.

High Court clears ban on Chittapur Namo Bharat programme and Priyank Kharge faced insult sat
Author
First Published Feb 29, 2024, 4:08 PM IST

ಬೆಂಗಳೂರು (ಫೆ.29): ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆಯೋಜನೆ ಮಾಡಲಾಗಿದ್ದ ನಮೋ ಭಾರತ್ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರದಿಂದ ವಿಧಿಸಲಾಗಿದ್ದ ನಿರ್ಬಂಧವನ್ನು ಹೈಕೋರ್ಟ್‌ನಿಂದ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷ ಆಡಳಿತ ಸಾಧನೆಗಳನ್ನು ಹಂಚಿಕೊಳ್ಳಲು ಆಗಮಿಸುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣಕ್ಕೂ ಅನುಮತಿ ಸಿಕ್ಕಂತಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಯಬೇಕಿದ್ದ ನಮೋ ಭಾರತ್ ಕಾರ್ಯಕ್ರಮದ ಅನುಮತಿ ರದ್ದು ಮಾಡಲಾಗಿತ್ತು. ಜೊತೆಗೆ, ಚಿಂತಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜೊಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಶ್ರೀಶಾನಂದ ಅವರು, ಈ ಕಾರ್ಯಕ್ರಮವನ್ನು ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಮಾಡಬೇಕು. ಜಿಲ್ಲಾ ಪ್ರವೇಶಾತಿಗೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ತಿಳಿಸಿದರು.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

ಈ ಮೂಲಕ ಪೊಲೀಸರು ಮತ್ತು ತಹಸಿಲ್ದಾರ್ ಹೇರಿದ್ದ ನಿರ್ಬಂಧವನ್ನು ವಜಾ ಮಾಡಿ, ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಈ ಮೂಲಕ ನಮೋ ಭಾರತ್ ಕಾರ್ಯಕ್ರಮಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವಾಗಿದೆ.

ಕಾರ್ಯಕ್ರಮ ನಿಷೇಧಕ್ಕೆ ಸರ್ಕಾರ ಕೊಟ್ಟ ಕಾರಣವೇನು?
ಚಿತ್ತಾಪೂರ ಪಟ್ಟಣದ ಬಾಪುರಾವ ಕಲ್ಯಾಣ ಮಂಟಪದಲ್ಲಿ  ಚಿತ್ತಾಪೂರ ತಾಲೂಕಾ ಬಿ.ಜೆ.ಪಿ ಪಕ್ಷದ ಅಧ್ಯಕ್ಷ ಶ್ರೀ ನೀಲಕಂಠ ರಾವ ಪಾಟೀಲ್ ನೇತೃತ್ವದಲ್ಲಿ ಫೆ.29ರಂದು ಸಂಜೆ 6 ಗಂಟೆಗೆ 'ನಮೋ ಬ್ರಿಗೇಡ್ ಕಾರ್ಯಕ್ರಮ' ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಮೋ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ, ನಮೋ ಬ್ರಿಗೇಡ್ ವಿವಿಧ ಕಡೆಗಳಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್‌ ನಾಯಕರಿಗೆ ಆಕ್ಷೇಪಾರ್ಹ ಮತ್ತು ಅಸಂಸದೀಯ ಪದಗಳನ್ನು ಬಳಸಿರುವುದು ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ಭಾಷಣ ಮಾಡುವುದು ಕಂಡುಬಂದಿದೆ.

ಜೊತೆಗೆ, ಜನರಿಗೆ ಸುಳ್ಳು ಮಾಹಿತಿಗಳನ್ನು ನೀಡಿ ಅವರಿಗೆ ದಾರಿ ತಪ್ಪಿಸುವ ಕೆಲಸ ಮಾಡುವುದು, ಸಾಮಾಜಿಕ ಜಾಲ ತಾಣಗಳಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಇವರ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಇವರು ನಿರ್ದಿಷ್ಟವಾದ ಒಂದು ಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡುವ ಮನೋಭಾವನೆವುಳ್ಳವರಾಗಿರುತ್ತಾರೆ ಎಂದು ತಿಳಿದು ಬಂದಿರುತ್ತದೆ.

ಪುತ್ತಿಲ ಪರಿವಾರಕ್ಕೆ ಸೆಡ್ಡು; ಮತ್ತೆ ಭಾರಿ ಅಂತರದಿಂದ ಗೆಲ್ಲುತ್ತೇನೆಂದ ಸಂಸದ ನಳಿನ್ ಕುಮಾರ್ ಕಟೀಲ್!

ಐದು ದಿನಗಳ ಕಾಲ ಪ್ರವೇಶ ನಿರ್ಬಂಧಿಸಿದ್ದ ಸರ್ಕಾರ: ಆದ್ದರಿಂದ ಸಾರ್ವಜನಿಕ ಹಿತದೇಷ್ಠಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೀಶೆಯಲ್ಲಿ ಫೆ.29ರಂದು ಚಿತ್ತಾಪೂರ ಪಟ್ಟಣದ ಬಾಪುರಾವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ನಮೋ ಚಿರಗೇಡ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಹಾಗೂ ಶ್ರೀ ಚಕ್ರವರ್ತಿ ಸೂಲಿ ಬೆಲೆಯವರಿಗೆ ಕಲಬುರಗಿ ಜಿಲ್ಲೆ ಪ್ರವೇಶ ಮಾಡದಂತೆ ನಿಷೇಧಿಸುವಂತೆ ಆದೇಶ ಹೊರಡಿಸಲು ಕೋರಿತ್ತಾರೆ. ಈ ಹಿನ್ನೆಲೆಯಲ್ಲಿ ಫೆ.28ರಿಂದ ಮಾ.4ರವರೆಗೆ ಚಕ್ರವರ್ತಿ ಸೂಲಿಬೆಲೆ ಅವರು ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಪ್ರವೇಶ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿತ್ತು.

Follow Us:
Download App:
  • android
  • ios