ಡಿಸಿಎಂ ಡಿಕೆಶಿವಕುಮಾರ್‌ಗೆ ಬಿಗ್ ಶಾಕ್: ಅಕ್ರಮ ಆಸ್ತಿ ಪ್ರಕರಣ ಸಿಬಿಐ ತನಿಖೆಗೆ ಮುಂದುವರೆಸಲು ಹೈಕೋರ್ಟ್ ಅಸ್ತು
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ಪುನಾರಂಭಿಸುವಂತೆ ಸಿಬಿಐ ಇಲಾಖೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಬೆಂಗಳೂರು (ಅ.19): ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.
ಇನ್ನು ಡಿ.ಕೆ. ಶಿವಕುಮಾರ್ ಅವರು 200 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಸಂಬಧಪಟ್ಟಂತೆ ಸಿಬಿಐ ಎಫ್ಐಆರ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಿಬಿಐ ಸಂಕಷ್ಟ ಮುಂದುವರೆದಿದೆ. ಜೊತೆಗೆ, ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಲು ಅನುಕೂಲ ಆಗುವಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯನ್ನು ನೀಡಿತ್ತು. ಈಗ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ಕೂಡ ಹೈಕೋರ್ಟ್ ತೆರವು ಮಾಡಿದೆ.
ದಸರಾ ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿ ನಿಷೇಧಿಸಿದ ಸರ್ಕಾರ!
ಸಿಎಂ ಆಗುವ ಕನಸು ಕಾಣುತ್ತಿದ್ದ ಡಿಕೆಶಿಗೆ ದೊಡ್ಡ ಹಿನ್ನಡೆ: 2014ರಿಂದ 2018 ರವರೆಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಾಗಿತ್ತು. ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೊಪ ಇತ್ತು. ಈ ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿತ್ತು. ಸಿಬಿಐ ವಾದಕ್ಕೆ ಮನ್ನಣೆ ನೀಡಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಈಗ ಅರ್ಧಕ್ಕೆ ನಿಂತಿದ್ದ ತನಿಖೆಯನ್ನು ಸಿಬಿಐ ಮುಂದುವರೆಸಲಿದೆ. ತನಿಖೆ ಅಂತಿಮ ಹಂತಕ್ಕೆ ಬಂದಿದ್ದು ಸದ್ಯದಲ್ಲೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ. ಇನ್ನು ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಹಿನ್ನಡೆ ಉಂಟಾಗಿದೆ.
ಮುಂದಿನ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶ: ಇನ್ನು ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಬಹು ದಿನಗಳಿಂದ ತನಿಖೆ ಮಾಡುತ್ತಿರುವ ಸಿಬಿಐ ಇಲಾಖೆಯು ಮುಂದುನ 3 ತಿಂಗಳಲ್ಲಿ ಎಲ್ಲ ತನಿಖೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ. ಇನ್ನು ಸಿಬಿಐ ಮುಂದಿನ 3 ತಿಂಗಳಲ್ಲಿ ಪೂರ್ಣ ಪ್ರಮಾಣದ ತನಿಖೆಯನ್ನು ಮಾಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ. ಇದನ್ನು ಆಧರಿಸಿ ಹೈಕೋರ್ಟ್ ತೀರ್ಪು ನೀಡಲಿದೆ. ಒಂದು ವೇಳೆ 2014 ರಿಂದ 2019ರ ಅವಧಿಯ ಸರ್ಕಾರದ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಸಾಬೀತಾದಲ್ಲಿ ಮತ್ತೊಮ್ಮೆ ಡಿ.ಕೆ. ಶಿವಕುಮಾರ್ ಜೈಲು ಸೇರುವ ಸಾಧ್ಯತೆಯಿದೆ.
ಹಿಂದೂ ಆಚರಣೆಗಳ ದ್ವೇಷಕ್ಕೆ ಒಂದಾದ ಸಿದ್ಧರಾಮಯ್ಯ-ಸ್ಟ್ಯಾಲಿನ್, ಆಯುಧಪೂಜೆಯೇ ಟಾರ್ಗೆಟ್!
ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅವಕಾಶ: ರಾಜ್ಯದಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಲಾಖೆಯ ಎಫ್‌ಐಆರ್ ರದ್ದುಗೊಳಿಸುವಂತೆ ಡಿ.ಕೆ. ಶಿವಕುಮಾರ್ ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅರ್ಜಿಯ ವಿಚಾರವಾಗಿ ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್‌ಗೂ ಹೋಗಲು ಅವಕಾಶವಿದೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕ ನಂತರ ಮೇಲ್ಮನವಿ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರ ಮಾಡುವ ಸಾಧ್ಯತೆಯಿದೆ. ಇನ್ನು ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ನಂತರವೂ ಅದರ ವಿರುದ್ಧ ಮೇಲ್ಮನವಿ ಹೋಗುವುದಕ್ಕೆ ಅವಕಾಶವಿದೆ ಎಂದು ಹೇಳಲಾಗುತ್ತಿದೆ.