ಕೋವಿಡ್-19 ರಹಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು(ಜು.10): ಕೋವಿಡ್-19 ರಹಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಕೀಲ ರಮೇಶ್ ನಾಯಕ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಆದೇಶ ಮಾಡಿತು.
ಭಾರತದ ನ್ಯೂಸ್ ಚಾನಲ್‌ಗಳಿಗೆ ನೇಪಾಳ ನಿಷೇಧ!
ಅಲ್ಲದೆ, ಕೋವಿಡ್-19 ರಹಿತ ರೋಗಿಗಳಿಗೆ ಚಿಕಿತ್ಸೆ ಅಥವಾ ವೈದ್ಯಕೀಯ ಸೇವೆಗಳನ್ನು ನಿರಾಕರಿಸುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತ ವಿವರಗಳನ್ನು ಸಲ್ಲಿಸಬೇಕು.
ಚಿಕಿತ್ಸೆಗಾಗಿ ಕೊರೋನಾ ಸೋಂಕಿತ ತಾಯಿ -ಮಗು ಅಲೆದಾಟ
ಈ ಕುರಿತು ದೂರುಗಳೇನಾದರೂ ಬಂದಿದ್ದರೆ, ಆ ಬಗ್ಗೆ ಕ್ರಮವೇನಾದರೂ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆಯೂ ಜು.17ರ ಒಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ವೈದ್ಯಕೀಯ ಪರಿಷತ್‌ಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
