ಜನತಾ ಕರ್ಫ್ಯೂ: ಮನೆ ಬಾಗಿಲಿಗೆ ಪಡಿತರ ವಿತರಣೆ?
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು (ಮೇ.06): ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಕೀಲ ಎಲ್. ರಮೇಶ್ ನಾಯಕ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. ಅಲ್ಲದೇ ಈ ಅರ್ಜಿಯನ್ನು ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾಯಿಸಿತು.
ಜನತಾ ಕರ್ಫ್ಯೂ ವಿಫಲ, ಪೂರ್ಣ ಲಾಕ್‌ಡೌನ್‌ಗೆ ಚಿಂತನೆ: ಡಾ.ಸುಧಾಕರ್
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸಂದಣಿ ಸೇರುವುದನ್ನು ತಪ್ಪಿಸಲು ರಾಜ್ಯದ 1.47 ಕೋಟಿ ಬಿಪಿಎಲ್ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona