ಜೀವಾ ಆತ್ಮಹತ್ಯೆ ಕೇಸ್: ಲೋಕಾ ಕೋರ್ಟ್ ನಡೆಗೆ ಹೈಕೋರ್ಟ್ ಗರಂ
ಲೋಕಾಯುಕ್ತ ಕೋರ್ಟ್ ನಡೆಯನ್ನು ತೀವ್ರವಾಗಿ ಆಕ್ಷೇಪಿಸಿದ ನ್ಯಾಯಪೀಠ, ಹೈಕೋರ್ಟ್ ನಿರ್ದೇಶನ ನೀಡದ ಹೊರ ತು ಎಸ್‌ಐಟಿಗೆ ಸಂಬಂಧಿಸಿದ ಯಾವುದೇ ವಿಚಾರದ ಕುರಿತು ಪ್ರತಿಕ್ರಿಯಿಸುವಾಗ ಎಚ್ಚರಿಕೆ ವಹಿಸಬೇಕು ಮತ್ತು ನಿಯಂತ್ರಣ ಕಾಪಾಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದೆ.
ಬೆಂಗಳೂರು(ಜ.11): ಭೋವಿ ನಿಗಮದ ಹಗರಣ ಆರೋಪ ಎದುರಿಸುತ್ತಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಚಿಸಿರುವ ಸಿಬಿಐ ಅಧಿಕಾರಿಗಳ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಲೋಕಾಯುಕ್ತ ವಿಶೇಷ ನ್ಯಾಯಾಲಯ ಶೋಕಾಸ್ ನೋಟಿಸ್ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಈ ನಡೆ ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಬರುತ್ತದೆ ಎಂದು ಕಟುವಾಗಿ ನುಡಿದಿದೆ.
ಲೋಕಾಯುಕ್ತ ವಿಶೇಷ ನ್ಯಾಯಾಲಯವು ಎಸ್‌ಐಟಿಗೆ ಜಾರಿ ಮಾಡಿರುವ ನೋಟಿಸ್ ಪ್ರಶ್ನಿಸಿ ಸಿಬಿಐ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಪ್ಲೀಸ್ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿ, ಕರ್ನಾಟಕ ಹೈಕೋರ್ಟ್ ಮೊರೆ ಹೋದ ಪ್ರಜೆ!
ಈ ವೇಳೆ ಲೋಕಾಯುಕ್ತ ಕೋರ್ಟ್ ನಡೆಯನ್ನು ತೀವ್ರವಾಗಿ ಆಕ್ಷೇಪಿಸಿದ ನ್ಯಾಯಪೀಠ, ಹೈಕೋರ್ಟ್ ನಿರ್ದೇಶನ ನೀಡದ ಹೊರ ತು ಎಸ್‌ಐಟಿಗೆ ಸಂಬಂಧಿಸಿದ ಯಾವುದೇ ವಿಚಾರದ ಕುರಿತು ಪ್ರತಿಕ್ರಿಯಿಸುವಾಗ ಎಚ್ಚರಿಕೆ ವಹಿಸಬೇಕು ಮತ್ತು ನಿಯಂತ್ರಣ ಕಾಪಾಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದೆ. ಅಲ್ಲದೆ, ಜೀವಾ ಆತ್ಮಹತ್ಯೆ ಗೆ ಸಂಬಂಧಿಸಿ ಈವರೆಗೆ ನಡೆಸಿರುವ ತನಿಖೆಯ ವರದಿಯನ್ನು ಮುಂ ದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಎಸ್‌ಐಟಿಗೆ ಸೂಚಿಸಿದೆ.
ಇದಕ್ಕೂ ಮುನ್ನ ಸಿಬಿಐ ಹಾಗೂ ರಾಜ್ಯ ಸರ್ಕಾರದ ಪರವಕೀಲರು, ಪ್ರಕರಣ ಕುರಿತು ತನಿಖೆ ನಡೆಸಲು ಹೈಕೋರ್ಟ್ ಸಿಬಿಐ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಅಲ್ಲದೆ, ಅಗತ್ಯಬಿದ್ದಲ್ಲಿ ಎಸ್‌ಐಟಿ ಬೇರೆತನಿಖಾಧಿಕಾರಿಗಳ ನೆರವು ಪಡೆಯಬಹುದು ಎಂದು ಸ್ಪಷ್ಟಪಡಿಸಿದೆ.
ಜನನ ಪ್ರಮಾಣ ಪತ್ರದಲ್ಲಿ ಲಿಂಗ ಬದಲಾವಣೆಗೆ ಹೈಕೋರ್ಟ್ ವಿಶೇಷ ನಿರ್ದೇಶನ
ಈ ಹಿನ್ನೆಲೆಯಲ್ಲಿ ಬೇರೆ ಪೊಲೀಸ್ ಅಧಿಕಾರಿಗಳ ಸಹಾಯ ಪಡೆಯಲಾಗಿದೆ. ಆದರೆ, ಲೋಕಾಯುಕ್ತ ನ್ಯಾಯಾಲಯವು ಈ ಸಂಬಂಧ ಎಸ್‌ಐಟಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದೆ ಎಂದು ಪೀಠದ ಗಮನ ಸೆಳೆದರು. ಇದರಿಂದ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿರುದ್ಧ ಅಮಾಧಾನ ವ್ಯಕ್ತಪಡಿಸಿತು.
ಪ್ರಕರಣವೇನು?:
ಭೋವಿ ಅಭಿವೃದ್ದಿ ನಿಗಮ ಬಹುಕೋಟಿ ಹಗರಣ ತನಿಖೆ ನೆಪದಲ್ಲಿ ಸಿಐಡಿ ಪೊಲೀಸರು ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆವಕೀಲೆ ಎಸ್. ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸಲು ಬೆಂಗಳೂರು ಸಿಬಿಐನ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ವರ್ಮಾ, ರಾಜ್ಯ ಗೃಹ ರಕ್ಷಕ ದಳದ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅಕ್ಷಯ್ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಅವರನ್ನು ಒಳಗೊಂಡ ಎಸ್‌ಐಟಿಯನ್ನು ಹೈಕೋರ್ಟ್ ರಚಿಸಿತ್ತು. ತನಿಖಾ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನೀಡಿತ್ತು.