ನ್ಯಾಯಾಲಯ ಹೇಳಿದರೂ ಸಹಜೀವನ ನಡೆಸದಿದ್ರೆ ವಿಚ್ಛೇದನಕ್ಕೆ ಆಧಾರ: ಹೈಕೋರ್ಟ್
ಪ್ರಕರಣವೊಂದರಲ್ಲಿ ಒಂದಾಗಿ ಬಾಳುವಂತೆ ಸೂಚಿಸಿದ್ದ ನ್ಯಾಯಾಲಯದ ಆದೇಶವನ್ನು ಪತ್ನಿ ಪಾಲಿಸದೇ ಇದ್ದರೂ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಲು ನಿರಾಕರಿಸಿದೆ ಎಂದು ಆಕ್ಷೇಪಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಮಾಡಿ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.

ಬೆಂಗಳೂರು(ಅ.21): ಪತಿಯೊಂದಿಗೆ ಬಾಳುವಂತೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದಿರುವುದು ವಿವಾಹ ವಿಚ್ಛೇದನಕ್ಕೆ ಆಧಾರವಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.
ಪ್ರಕರಣವೊಂದರಲ್ಲಿ ಒಂದಾಗಿ ಬಾಳುವಂತೆ ಸೂಚಿಸಿದ್ದ ನ್ಯಾಯಾಲಯದ ಆದೇಶವನ್ನು ಪತ್ನಿ ಪಾಲಿಸದೇ ಇದ್ದರೂ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಲು ನಿರಾಕರಿಸಿದೆ ಎಂದು ಆಕ್ಷೇಪಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಮಾಡಿ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.
ಅಕ್ರಮ ಆಸ್ತಿ ಪ್ರಕರಣ ಮತ್ತೆ ಸಂಕಷ್ಟ ; ಡಿಕೆಶಿ ವಾದ ಒಪ್ಪದ ಹೈಕೋರ್ಟ್
ವಿವಾಹದ ನಂತರ ಕೆಲವು ವರ್ಷ ಒಂದಾಗಿ ಬಾಳಿದ್ದ ಪತಿ- ಪತ್ನಿ ನಂತರ ಪ್ರತ್ಯೇಕವಾಗಿ ವಾಸ ಮಾಡಿದ್ದರು. ಇದರಿಂದ ಪತಿಯ ಮನವಿ ಮೇರೆಗೆ ಕೌಟುಂಬಿಕ ನ್ಯಾಯಾಲಯ ದಂಪತಿಯ ವೈವಾಹಿಕ ಜೀವನದ ಹಕ್ಕುಗಳನ್ನು ಮರು ಸ್ಥಾಪಿಸಿತ್ತು. ಜತೆಗೆ, ಪತಿಯೊಂದಿಗೆ ಒಂದುಗೂಡಿ ಬಾಳುವಂತೆ ಪತ್ನಿಗೆ ಸೂಚಿಸಿ ಏಕಪಕ್ಷೀಯ ಆದೇಶ ಹೊರಡಿಸಿತ್ತು. ಒಂದೂವರೆ ವರ್ಷ ಕಳೆದರೂ ಪತ್ನಿ ನ್ಯಾಯಾಲಯದ ಆದೇಶ ಪಾಲಿಸದೇ ಇರುವ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ಇದು ವಿವಾಹ ವಿಚ್ಚೇದನಕ್ಕೆ ಆಧಾರವಾಗಲಿದೆ. ಈ ಅಂಶ ಪರಿಗಣಿಸದೆ ಕೌಟುಂಬಿಕ ನ್ಯಾಯಾಲಯ ಪತಿಯ ಅರ್ಜಿ ವಜಾಗೊಳಿಸಿರುವುದು ಸರಿಯಲ್ಲ ಎಂದು ತೀರ್ಮಾನಿಸಿದ ಹೈಕೋರ್ಟ್, ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.