ವಿಷ್ಣುವರ್ಧನ ಸ್ಮಾರಕಕ್ಕೆ 10 ಗುಂಟೆ ಜಾಗಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾ
ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯೂ ಅಡಗಿಲ್ಲ. ಇಂತಹ ವಿಚಾರಗಳ ಬಗ್ಗೆ ಹೈಕೋರ್ಟ್ ವ್ಯವಹರಿಸಲಾಗದು. ಅಗತ್ಯವಿದ್ದರೆ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬಹುದು. ಅರ್ಜಿದಾರರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಬಹುದಾದರೂ ಆ ಕ್ರಮಕ್ಕೆ ಮುಂದಾಗದೆ ತಾಳ್ಮೆಯಿಂದಲೇ ಅರ್ಜಿ ವಜಾಗೊಳಿಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು(ಜೂ.05): ನಟ ಡಾ। ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಸಂಬಂಧ ವಿ.ಎಸ್.ಎಸ್. ಅಭಿಮಾನ್ ಡಾ। ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು.
ಡಾ ರಾಜ್‌ಗೆ ಪದ್ಮಭೂಷಣ, ವಿಷ್ಣುವರ್ಧನ್‌ಗೆ ಚಪ್ಪಲಿ ಎಸೆತ; ಯಾಕಿಂಥ ಅನ್ಯಾಯ ನಡೆದಿತ್ತು?
ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯೂ ಅಡಗಿಲ್ಲ. ಇಂತಹ ವಿಚಾರಗಳ ಬಗ್ಗೆ ಹೈಕೋರ್ಟ್ ವ್ಯವಹರಿಸಲಾಗದು. ಅಗತ್ಯವಿದ್ದರೆ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬಹುದು. ಅರ್ಜಿದಾರರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಬಹುದಾದರೂ ಆ ಕ್ರಮಕ್ಕೆ ಮುಂದಾಗದೆ ತಾಳ್ಮೆಯಿಂದಲೇ ಅರ್ಜಿ ವಜಾಗೊಳಿಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಡಾ। ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಒಬ್ಬ ಮೇರು ನಟ. ಅವರ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ಭವನ ನಿರ್ಮಾಣ ಆಗಬೇಕು ಎಂಬುದು ಅರ್ಜಿದಾರರ ಅಭಿಲಾಷೆ. ವಿಷ್ಣುವರ್ಧನ್ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋಗೆ ಮಂಜೂರಾದ ಜಾಗದ ಪೈಕಿ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ ಮೈಲಸಂದ್ರ ಗ್ರಾಮದ ಸರ್ವೇ ನಂ. 26 ಮತ್ತು 68ರಲ್ಲಿ 10 ಗುಂಟೆ ಜಾಗವನ್ನು ಸ್ಮಾರಕ ಭವನ ನಿರ್ಮಾಣಕ್ಕೆ ಮಂಜೂರು ಮಾಡಲು 2017ರಲ್ಲಿ ತಹಸೀಲ್ದಾರ್ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈವರೆಗೂ ಆ ಪ್ರಸ್ತಾವನೆಗೆ ಅನುಮೋದನೆ ದೊರೆತಿಲ್ಲ. ಆದ್ದರಿಂದ ಈ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.