Asianet Suvarna News Asianet Suvarna News

ಖಾಸಗಿ ಬಸ್‌ಗಳಲ್ಲೂ ಆಡಿಯೋ ಪ್ರಕಟಣೆ ವ್ಯವಸ್ಥೆ ತನ್ನಿ: ಹೈಕೋರ್ಟ್‌

ಸರ್ಕಾರಿ ಸಾರಿಗೆ ಬಸ್‌ಗಳ ಬಳಿಕ ಖಾಸಗಿ ಬಸ್‌ಗಳಲ್ಲೂ ಅಂಧರು ಹಾಗೂ ಅಂಗವಿಕಲರಿಗೆ ಸಹಾಯವಾಗುವಂತೆ ಆಡಿಯೋ ರೂಪದಲ್ಲಿ ಪ್ರಕಟಣೆ ಹೊರಡಿಸುವ ವ್ಯವಸ್ಥೆ ಜಾರಿಗೊಳಿಸಲು ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿದೇರ್ಶಿಸಿದೆ. 

high court ordered to issue circular on audio announcement system in bus gvd
Author
First Published Nov 11, 2023, 2:00 AM IST

ಬೆಂಗಳೂರು (ನ.11): ಸರ್ಕಾರಿ ಸಾರಿಗೆ ಬಸ್‌ಗಳ ಬಳಿಕ ಖಾಸಗಿ ಬಸ್‌ಗಳಲ್ಲೂ ಅಂಧರು ಹಾಗೂ ಅಂಗವಿಕಲರಿಗೆ ಸಹಾಯವಾಗುವಂತೆ ಆಡಿಯೋ ರೂಪದಲ್ಲಿ ಪ್ರಕಟಣೆ ಹೊರಡಿಸುವ ವ್ಯವಸ್ಥೆ ಜಾರಿಗೊಳಿಸಲು ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿದೇರ್ಶಿಸಿದೆ. ಬೆಂಗಳೂರಿನ ಅಂಧ ವ್ಯಕ್ತಿ ಎನ್.ಶ್ರೇಯಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿದೆ. ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. 

ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳು ಸಂಚಾರ ಕೈಗೊಳ್ಳುತ್ತಿರುವೆ. ಆ ಬಸ್‌ಗಳಲ್ಲಿ ಪ್ರಯಾಣಿಸುವ ಅಂಗವಿಕಲರಿಗೆ ಅಗತ್ಯ ನೆರವು ಕಲ್ಪಿಸಬೇಕಾಗಿದೆ. ಹಾಗಾಗಿ, ಈ ವಿಚಾರದಲ್ಲಿ ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿ ಸುತ್ತೋಲೆ ಹೊರಡಿಸಬೇಕು. ಆ ನಿರ್ದೇಶನ ಹಾಲಿ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್‌ಗಳಿಗೆ ಮಾತ್ರವಲ್ಲ. ಹೊಸದಾಗಿ ಪರ್ಮಿಟ್ ನೀಡುವ ಬಸ್‌ಗಳಿಗೂ ಅನ್ವಯವಾಗುವಂತೆ ಇರಬೇಕು ಎಂದು ಆದೇಶದಲ್ಲಿ ತಿಳಿಸಿದೆ. 

ಬಿಜೆಪಿಗೆ ಬರುವಾಗ ಜಾಮೂನು ನೀಡ್ತಾರೆ, ಬಳಿಕ ವಿಷ ಕೊಡ್ತಾರೆ: ಶಾಸಕ ಎಸ್.ಟಿ.ಸೋಮಶೇಖರ್

ಅಲ್ಲದೆ, ವಿಕಲಚೇತನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಆಪ್ ಸಿದ್ಧಪಡಿಸುವಂತೆ ಬಿಎಂಟಿಸಿ ಮತ್ತು ರಾಜ್ಯ ಸರ್ಕಾರಕ್ಕೆ ಅರ್ಜಿದಾರರು ಮನವಿ ಸಲ್ಲಿಸಬೇಕು. ಅದನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು. ಈ ಕುರಿತು ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಾಲಯ ನಾಲ್ಕು ವಾರ ವಿಚಾರಣೆಯನ್ನು ಮುಂದೂಡಿದೆ. ಆರಂಭದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮತ್ತು ಮೆಟ್ರೊ ರೈಲುಗಳಲ್ಲಿ ಆಡಿಯೋ ಪ್ರಕಟಣಾ ವ್ಯವಸ್ಥೆಯಿತ್ತು. 

ಸಿದ್ದು ಸುಳ್ಳು ಹೇಳಿದ್ದಾರೆ, ಯಾವ ಜಿಲ್ಲೆಗೂ ಬರ ಪರಿಹಾರ ಹೋಗಿಲ್ಲ: ಈಶ್ವರಪ್ಪ

ಇದರಿಂದ ಎಲ್ಲೆಲ್ಲಿ ಇಳಿಯಬೇಕು ಎಂಬುದಕ್ಕೆ ಅಂಧ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಆದರೆ ಆ ವ್ಯವಸ್ಥೆಯನ್ನು ದಿಢೀರ್‌ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾರಿಗೆ ಬಸ್‌ಗಳಲ್ಲಿ ಇಂತಹ ಆಡಿಯೋ ವ್ಯವಸ್ಥೆ ಚಾಲ್ತಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ಓಲಾ ಮತ್ತು ಉಬರ್ ಟ್ಯಾಕ್ಸಿಗಳಲ್ಲೂ ಸಹ ಗೂಗಲ್ ಮ್ಯಾಪ್ ಸಹಾಯದಿಂದ ನೆರವು ಲಭ್ಯವಾಗುತ್ತಿದೆ. ಆಡಿಯೋ ವ್ಯವಸ್ಥೆ ಇಲ್ಲದಿದ್ದರೆ ವಿಕಲಚೇತನರಿಗೆ ಸಾರ್ವಜನಿಕ ಹಾಗೂ ಖಾಸಗಿ ಬಸ್ ಹಾಗೂ ಇತರೆ ಸಂಚಾರ ವ್ಯವಸ್ಥೆಗಳಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ವಿವರಿಸಿದ್ದರು.

Follow Us:
Download App:
  • android
  • ios