Asianet Suvarna News Asianet Suvarna News

ಸಿಎಂ ಯಡಿಯೂರಪ್ಪಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಬಿಎಸ್‌ವೈ ವಿರುದ್ಧದ ಕೇಸ್‌ ರದ್ದತಿಗೆ ಹೈಕೋರ್ಟ್‌ ನಕಾರ| ಲೋಕಾಯುಕ್ತ ಕೋರ್ಟ್‌ ವಿಚಾರಣೆ ರದ್ದುಪಡಿಸುವಂತೆ ಕೋರಿ 2019ರಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದ ಯಡಿಯೂರಪ್ಪ| ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌| 

High Court Refused Cancellation of Case Against BS Yediyurappa grg
Author
Bengaluru, First Published Dec 23, 2020, 9:58 AM IST

ಬೆಂಗಳೂರು(ಡಿ.23):  ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ನಡೆದಿರುವ ಲೋಕಾಯುಕ್ತ ಕೋರ್ಟ್‌ ವಿಚಾರಣೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. 

ತಮ್ಮ ವಿರುದ್ಧದ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಮತ್ತು ಈ ಸಂಬಂಧ ನಡೆದಿರುವ ಲೋಕಾಯುಕ್ತ ಕೋರ್ಟ್‌ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು 2019ರಲ್ಲಿ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. 

ಬಿಎಸ್‌ವೈ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದ ಸ್ವಾಮೀಜಿ

ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿ, ತನಿಖೆ ಮುಂದುವರೆಸುವ ನಿರ್ದೇಶನವಿದ್ದರೂ ಈ ದಿಸೆಯಲ್ಲಿ ಕಾರ್ಯನಿರ್ವಹಿಸದ ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ.
 

Follow Us:
Download App:
  • android
  • ios