ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆಯ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡವನ್ನು ವಿಧಿಸಿದೆ

ಬೆಂಗಳೂರು (ಅ.04): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆಯ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡವನ್ನು ವಿಧಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಬೆಂಗಳೂರಿನ ಶೌಚಾಲಯಗಳ ನಿರ್ವಹಣೆ ಸೂಕ್ತವಾಗಿಲ್ಲ ಎಂಬ ಮನವಿಗಳು ಬಂದಿದ್ದರೂ ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೋಟ್ಯಂತರ ಜನರು ವಾಸವಾಗಿದ್ದು, ಲಕ್ಷಾಂತರ ಜನರು ಬಂದು ವಾಪಸ್‌ ಹೋಗುತ್ತಾರೆ. ಅವರಿಗೆ, ಅನುಕೂಲವಾಗುವಂತೆ ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಣೆ ಮಾಡಬೇಕು. ಆದರೆ, ಸರ್ಕಾರ ಇದಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬ ದೂರು ಬಂದಿದೆ. ಈ ಸಂಬಂಧಪಟ್ಟಂತೆ ಹೈಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯದ ವಿಭಾಗೀಯ ಪೀಠವು ಬೆಂಗಳೂರಿನಲ್ಲಿ ಶೌಚಾಲಯ ನಿರ್ವಹಣೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಬೆಂಗಳೂರಿನಲ್ಲಿ 2.79 ಲಕ್ಷಕ್ಕೆ ಕುಸಿತಗೊಂಡ ಬೀದಿ ನಾಯಿಗಳ ಸಂಖ್ಯೆ: ಸಮೀಕ್ಷಾ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ಆದರೆ, ಬುಧವಾರ ನಡೆದ ಹೈಕೋರ್ಟ್‌ ವಿಚಾರಣೆ ವೇಳೆ ಶೌಚಾಲಯ ನಿರ್ವಹಣೆಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರವು ವರದಿಯನ್ನು ನೀಡಿಲ್ಲ. ಇದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯವು, ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ ವಿಧಿಸಿದೆ. ಸ್ವತಃ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ತಾಕೀತು ಮಾಡಲಾಗಿದೆ. ಇನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ದಂಡ ಪಾವತಿಸುವಂತೆ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾತಿಗೆ ಸೂಚನೆ ನಿಡಿದೆ.

ಬಿಜೆಪಿ ಅವಧಿಯಲ್ಲಿ 385 ಕ್ರಿಮಿನಲ್‌ ಕೇಸ್‌ ರದ್ದು, 2,361 ರೌಡಿಶೀಟರ್‌ಗಳ ಬಿಡುಗಡೆ: ಡಿ.ಕೆ. ಶಿವಕುಮಾರ್ ಮಾಹಿತಿ

ಬೆಂಗಳೂರಿನ ಲೆಟ್ಜ್ ಕಿಟ್ ಫೌಂಡೇಶನ್ ಬೆಂಗಳೂರಿನಲ್ಲಿ ಶೌಚಾಲಯಗಳ ನಿರ್ವಹಣೆ ಮಾಡದೇ ದುಸ್ಥಿತಿಯಲ್ಲಿರುವ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿತ್ತು. ಇದನ್ನು ವಿಚಾರಣೆ ಮಾಡಿದ್ದ ನ್ಯಾಯಾಲಯವು ಬೆಂಗಳೂರಿನ ನಿವಾಸಿಗಳ ಬಗ್ಗೆ ಸರ್ಕಾರ ಜವಾಬ್ದಾರಿಯುತವಾಗಿರಬೇಕು. ಶೌಚಾಲಯಗಳ ನಿರ್ಮಾಣ, ‌ನೈರ್ಮಲ್ಯದ ಬಗ್ಗೆ ವರದಿಗೆ ಸೂಚಿಸಿತ್ತು. ಆದರೆ, ವರದಿ ಸಲ್ಲಿಸಿಲ್ಲವೆಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ. ಇದರ ಬೆನ್ನಲ್ಲಿಯೇ ನ.2 ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಜರಿಗೆ ಹೈಕೋರ್ಟ್ ಸೂಚನೆ ನೀಡಲಾಗಿದೆ. ಜೊತೆಗೆ ದಂಡವನ್ನೂ ವಿಧಿಸಿದೆ.