*  ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸತಾಯಿಸುತ್ತಿರುವ ಸರ್ಕಾರ*   ಸೌಲಭ್ಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿರುವ ಫಲಾನುಭವಿಗಳು*  ಇನ್ನೂ ನಿವೇಶನಗಳನ್ನು ಯಾಕೆ ಫಲಾನುಭವಿಗಳಿಗೆ ನೀಡಿಲ್ಲ ಎಂದು ಪ್ರಶ್ನಿಸಿದ ನ್ಯಾಯಪೀಠ  

ಬೆಂಗಳೂರು(ಡಿ.08):  ವಿಶೇಷ ಆಶ್ರಯ ಯೋಜನೆಯಡಿ ವಿಕಲಚೇತನರು(Physical Disability), ಮಾಜಿ ಯೋಧರು ಮತ್ತು ವಿಧವೆಯರು ಸೇರಿದಂತೆ 202 ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಕಳೆದ ಒಂಬತ್ತು ವರ್ಷಗಳಿಂದಲೂ ಸತಾಯಿಸುತ್ತಿರುವ ಸರ್ಕಾರ(Government of Karnataka) ವಿರುದ್ಧ ಹೈಕೋರ್ಟ್‌(High Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ರಾಜೇಶ್ವರಿ ಸೇರಿದಂತೆ ನಾಲ್ವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ವಿಶೇಷ ಆಶ್ರಯ ಯೋಜನೆಯಡಿ 71 ಅಂಗವಿಕಲರು, ಇಬ್ಬರು ಮಾಜಿ ಯೋಧರು ಮತ್ತು 129 ನಿರಾಶ್ರಿತರು ಹಾಗೂ ವಿಧವೆಯರು(Widows) ಸೇರಿದಂತೆ ಒಟ್ಟು 202 ಫಲಾನುಭವಿಗಳನ್ನು ಗುರುತಿಸಲಾಗಿದೆ. ಆದರೆ, ಕಳೆದ 9 ವರ್ಷಗಳಿಂದ ಯೋಜನೆಯ ಸೌಲಭ್ಯವನ್ನು ಫಲಾನುಭವಿಗಳಿಗೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸೌಲಭ್ಯಕ್ಕಾಗಿ ಫಲಾನುಭವಿಗಳು ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ. ಇನ್ನೂ ನಿವೇಶನಗಳನ್ನು(Site) ಯಾಕೆ ಫಲಾನುಭವಿಗಳಿಗೆ ನೀಡಿಲ್ಲ ಎಂದು ಪ್ರಶ್ನಿಸಿತು.

ಚಾಮರಾಜನಗರ ಘಟನೆ: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ನಿವೇಶನ ಹಂಚಿಕೆ ಕುರಿತಂತೆ ಫಲಾನುಭವಿಗಳಿಗೆ ಈಗಾಗಲೇ ಹಕ್ಕುಪತ್ರ ವಿತರಿಸಲಾಗಿದೆ ಎಂದು ಸರ್ಕಾರಿ ವಕೀಲರು(Advocate) ಹೇಳಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಕೊನೆಯದಾಗಿ ನಾಲ್ಕು ವಾರ ಕಾಲಾವಕಾಶ ನೀಡಲಾಗುವುದು. ಈಗಾಗಲೇ ಗುರುತಿಸಲಾಗಿರುವ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯ ಕಲ್ಪಿಸಿ ವರದಿ ಸಲ್ಲಿಸಬೇಕು. ತಪ್ಪಿದರೆ ಪ್ರತಿವಾದಿ ವಸತಿ ಇಲಾಖೆ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಅರ್ಜಿಯ ಮುಂದಿನ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಾಕೀತು ಮಾಡಿತು.

ಡೀಸಿ ಮೇಲ್ವಿಚಾರಣೆ:

ಇದಕ್ಕೂ ಮುನ್ನ ಸರ್ಕಾರಿ ವಕೀಲರು, ವಿಶೇಷ ಆಶ್ರಯ ಯೋಜನೆಯಡಿ 202 ಫಲಾನುಭವಿಗಳನ್ನು ಗುರುತಿಸಲಾಗಿದೆ. 154 ಫಲಾನುಭವಿಗಳಿಗೆ(Beneficiaries) ಈಗಾಗಲೇ ಹಕ್ಕು ಪತ್ರ ವಿತರಿಸಲಾಗಿದೆ. ನಿವೇಶನ ವಿತರಿಸಲು ಸರ್ಜಾಪುರ ಹೋಬಳಿಯ ಆನೇಕಲ್‌ ತಾಲೂಕಿನಲ್ಲಿ ಭೂಮಿ ಗುರುತಿಸಲಾಗಿದೆ. ಬಡಾವಣೆ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಅದನ್ನು ಖುದ್ದು ಬೆಂಗಳೂರು ನಗರ ಜಿಲ್ಲಾಧಿಕಾರಿಯೇ ಮೇಲ್ವಿಚಾರಣೆ ವಹಿಸಿದ್ದಾರೆ. ಎಂಟು ವಾರ ಕಾಲಾವಕಾಶ ನೀಡಿದರೆ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಮ್ಯಾನ್‌ಹೋಲ್‌ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಕಲಬುರಗಿಯಲ್ಲಿ(Kalaburagi) ಶೌಚಗುಂಡಿ(Manhole) ಸ್ವಚ್ಛಗೊಳಿಸುವಾಗ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ ಘಟನೆ ಸಂಬಂಧ ರಾಜ್ಯ ಸರ್ಕಾರವನ್ನು ಈ ಹಿಂದೆಯೂ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. 
ರಾಜ್ಯದಲ್ಲಿ(Karnataka) ಮನುಷ್ಯರಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ಧತಿಯನ್ನು ತಡೆಯಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಲು ಕೋರಿ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್‌ನ (AICCTU) ಕರ್ನಾಟಕ ಘಟಕ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSL) ಹೈಕೋರ್ಟ್‌ಗೆ 2020ರ ಜುಲೈನಲ್ಲಿ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ನೇಮಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವಿಫಲ: KPSC ಮುಚ್ಚುವುದೇ ಲೇಸು, ಹೈಕೋರ್ಟ್‌

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ರಾಜ್ಯದಲ್ಲಿ ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಕಾಯ್ದೆ-2013 ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಹೈಕೋರ್ಟ್‌ 2020ರ ಡಿ.9ರಂದು ಸರ್ಕಾರಕ್ಕೆ ಆದೇಶಿಸಿದೆ. ಈ ಆದೇಶದ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಅರ್ಜಿ ಮಂಗಳವಾರ ಮತ್ತೆ ವಿಚಾರಣೆಗೆ ಬಂದಾಗ ಹೈಕೋರ್ಟ್‌ ಆದೇಶದ ಅನುಪಾಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು.

ವರದಿಯನ್ನು ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಸರ್ಕಾರವು ಹೈಕೋರ್ಟ್‌ ಆದೇಶವನ್ನು ಪಾಲನೆ ಮಾಡಿಲ್ಲ ಎಂಬುದು ವರದಿಯಿಂದ ತಿಳಿಯುತ್ತದೆ. ಅಲ್ಲದೆ, ಕಲಬುರಗಿ ಜಿಲ್ಲೆಯ ಕೈಲಾಶ್‌ ನಗರದಲ್ಲಿ ಜ.28 ರಂದು ಮ್ಯಾನ್‌ಹೋಲ್‌ ಸ್ವಚ್ಛ ಮಾಡಲು ಹದಿನೆಂಟು ಅಡಿ ಆಳದ ಗುಂಡಿಗೆ ಇಳಿದಿದ್ದ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟಿದ್ದರು ಎಂದು ನ್ಯಾಯಪೀಠದ ಗಮನಕ್ಕೆ ತಂದರು.