ಚನ್ನಪಟ್ಟಣ ಉಪಚುನಾವಣೆಗೆ 50 ಕೋಟಿಗೆ ಬೆದರಿಕೆ ಆರೋಪ: ಎಚ್‌ಡಿಕೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ತಡೆ

ವಿಜಯ್ ತಾತಾ ನೀಡಿದ್ದ ದೂರು ಆಧರಿಸಿ ಅಮೃತಹಳ್ಳಿ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿದೆ. 

High Court stay action against HD Kumaraswamy on  50 crore allegation of threat case grg

ಬೆಂಗಳೂರು(ನ.08):  ಚನ್ನಪಟ್ಟಣ ವಿಧಾನಸಭಾ ಉಪಚುನಾವ ಣೆಯ ಖರ್ಚಿಗೆ 50 ಕೋಟಿ ಹಣ ನೀಡುವಂತೆ ಉದ್ಯಮಿ ವಿಜಯ್ ತಾತಾಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಯಾವುದೇ ಬಲವಂತ ಕ್ರಮಕೈಗೊಳ್ಳದಂತೆ ಅಮೃತಹಳ್ಳಿ ನಗರದ ಠಾಣಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ವಿಜಯ್ ತಾತಾ ನೀಡಿದ್ದ ದೂರು ಆಧರಿಸಿ ಅಮೃತಹಳ್ಳಿ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿದೆ. 

ಚನ್ನಪಟ್ಟಣ ಎಲೆಕ್ಷನ್‌ಗೆ 50 ಕೋಟಿ ಹಣಕ್ಕೆ ಡಿಮ್ಯಾಂಡ್: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌

ಅರ್ಜಿದಾರರ ಪರ ವಕೀಲ ಎ.ವಿ. ನಿಶಾಂತ್, ಇದೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜೆಡಿಎಸ್ ನಗರದ ಘಟಕದ ಅಧ್ಯಕ್ಷ ರಮೇಶ್ ಗೌಡ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಅ.23ರಂದು ಆದೇಶಿಸಿದೆ ಎಂದು ಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದೆ ನ್ಯಾಯಪೀಠ, ಈ ಅರ್ಜಿದಾ ರರ (ಎಚ್.ಡಿ.ಕುಮಾರಸ್ವಾಮಿ) ವಿರುದ್ದವೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪೊಲೀಸರಿಗೆ ಸೂಚಿಸಿ ವಿಚಾರಣೆಯನ್ನು ನ.29ಕ್ಕೆ ಮುಂದೂಡಿತು. 

ಉಪಚುನಾವಣೆಗಾಗಿ 50 ಕೋಟಿ ರು. ನೀಡಬೇಕು ಎಂದು ರಮೇಶ್ ಗೌಡ ಮತ್ತು ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ತಾತಾ ದೂರು ನೀಡಿದ್ದರು.

Latest Videos
Follow Us:
Download App:
  • android
  • ios