Asianet Suvarna News Asianet Suvarna News

ಸಂಬರಗಿ ವಿರುದ್ಧದ ನಟಿ ಶೃತಿ ಹರಿಹರನ್‌ ಕೇಸಿಗೆ ಹೈಕೋರ್ಟ್ ತಡೆ

ತಮ್ಮ ಚಾರಿತ್ರ್ಯಹರಣ ಮಾಡುತ್ತಿದ್ದಾರೆಂದು ಆರೋಪಿಸಿ ನಟಿ ಶೃತಿ ಹರಿಹರನ್‌ ಅವರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ವಿರುದ್ಧ ಹೂಡಿದ್ದ ದಾವೆಯ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

High Court stays actress Shruti Hariharans case against Sambaragi rav
Author
First Published Dec 17, 2022, 1:22 AM IST

ಬೆಂಗಳೂರು (ಡಿ.17) : ತಮ್ಮ ಚಾರಿತ್ರ್ಯಹರಣ ಮಾಡುತ್ತಿದ್ದಾರೆಂದು ಆರೋಪಿಸಿ ನಟಿ ಶೃತಿ ಹರಿಹರನ್‌ ಅವರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ವಿರುದ್ಧ ಹೂಡಿದ್ದ ದಾವೆಯ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಶೃತಿ ಹರಿಹರನ್‌ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ನಗರದ 8ನೇ ಹೆಚ್ಚುವರಿ ಪ್ರಧಾನ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಪ್ರಶಾಂತ್‌ ಸಂಬರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆ ನೀಡಿ ಪ್ರಕರಣದ ವಿಚಾರಣೆಯನ್ನು 2023ರ ಫೆಬ್ರವರಿ 1ಕ್ಕೆ ಮುಂದೂಡಿದೆ.

FIR Against Prashanth Sambargi: ಪ್ರಶಾಂತ್ ಸಂಬರಗಿ  ಮತ್ತೆ ಸುದ್ದಿಯಲ್ಲಿ

‘ವಿಸ್ಮಯ’ ಚಿತ್ರದ ಚಿತ್ರೀಕರಣ ವೇಳೆ ಅರ್ಜುನ್‌ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶೃತಿ ಹರಿಹರನ್‌ ಆರೋಪ ಮಾಡಿದ್ದರು. ಈ ಸಂಬಂಧ 2018ರ ಅಕ್ಟೋಬರ್‌ 25ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಿರಿಯ ಕಲಾವಿದ ಅಂಬರೀಷ್‌ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅರ್ಜುನ್‌ ಸರ್ಜಾ ಅವರ ಆಪ್ತರಾಗಿದ್ದ ಸಂಬರಗಿ ಹಾಜರಿದ್ದರು.

ಈ ನಡುವೆ ಸಂಬರಗಿ ವಿರುದ್ಧ ದೂರು ದಾಖಲಿಸಿದ್ದ ಶೃತಿ ಹರಿಹರನ್‌, ತನ್ನ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ತನ್ನ ಖಾಸಗಿತನ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ್ದರಲ್ಲದೆ, ಸಂಬರಗಿ ವಿರುದ್ಧ ನಗರದ ಹೈಗ್ರೌಂಡ್‌್ಸ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 506(ಕ್ರಿಮಿನಲ… ಬೆದರಿಕೆ), 509(ಮಹಿಳೆ ಗೌರವಕ್ಕೆ ಧಕ್ಕೆ) ಆರೋಪದಡಿ ದೂರು ದಾಖಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರಕರಣದ ವಿಚಾರಣೆ ರದ್ದು ಕೋರಿ ಸಂಬರಗಿ ಹೈಕೋರ್ಚ್‌ ಮೆಟ್ಟಿಲೇರಿದ್ದರು.

#MeToo: ಮೊಕದ್ದಮೆ ವಜಾಗೊಳಿಸಲು ಕೋರಿದ್ದ ಶೃತಿಗೆ ಹಿನ್ನಡೆ

Follow Us:
Download App:
  • android
  • ios