Asianet Suvarna News Asianet Suvarna News

ಅಂಬೇಡ್ಕರ್‌, ದಲಿತರ ಬಗ್ಗೆ ಸ್ಕಿಟ್; ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್‌) ಪ್ರದರ್ಶಿಸಿದ ಆರೋಪದ ಮೇಲೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಬೆಂಗಳೂರು ಜೈನ್‌ ಯೂನಿವರ್ಸಿಟಿ ಸೆಂಟರ್‌ ಫಾರ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ನ ಏಳು ವಿದ್ಯಾರ್ಥಿಗಳ ವಿರುದ್ಧದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಚ್‌ ತಡೆಯಾಜ್ಞೆ ನೀಡಿದೆ.

High Court stays the case of objectionable skit on Ambedkar bengaluru rav
Author
First Published Jul 21, 2023, 5:10 AM IST

ಬೆಂಗಳೂರು (ಜು.21) :  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್‌) ಪ್ರದರ್ಶಿಸಿದ ಆರೋಪದ ಮೇಲೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಬೆಂಗಳೂರು ಜೈನ್‌ ಯೂನಿವರ್ಸಿಟಿ ಸೆಂಟರ್‌ ಫಾರ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌(Jain University Center for Management Studies)ನ ಏಳು ವಿದ್ಯಾರ್ಥಿಗಳ ವಿರುದ್ಧದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್‌ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ನೈಮಾ ಅಕ್ತರ್‌ ನಜಾರಿಯಾ ಸೇರಿ ಏಳು ಮಂದಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಕ್ರಿಮಿ ನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

 

ಅಂಬೇಡ್ಕರ್‌ಗೆ ಅವಮಾನ: ಕ್ಷಮೆ ಕೋರಿದ ಜೈನ್‌ ವಿಶ್ವವಿದ್ಯಾಲಯ

2023ರ ಫೆ.8ರಂದು ಕಾಲೇಜು ವತಿಯಿಂದ ನಗರದ ನಿಮ್ಹಾನ್ಸ್‌ ಸಮ್ಮೇಳನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಯುವಜನೋತ್ಸವದ ಅಂಗವಾಗಿ ಅರ್ಜಿದಾರ ವಿದ್ಯಾರ್ಥಿಗಳು ಸಮಾಜದಲ್ಲಿ ಚಾಲ್ತಿಯಲ್ಲಿರುವ ಮೀಸಲು ವ್ಯವಸ್ಥೆ ಕುರಿತು ವಿಡಂಬನಾತ್ಮಕ ಕಿರುನಾಟಕ (ಮ್ಯಾಡ್‌- ಆ್ಯಡ್‌ ಸ್ಕಿಟ್‌) ಪ್ರದರ್ಶನ ನೀಡಿದ್ದರು. ಅದರಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ದಲಿತರ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆಗಳನ್ನು ವಿದ್ಯಾರ್ಥಿಗಳನ್ನು ಹೇಳಿದ್ದರು ಎನ್ನಲಾಗಿತ್ತು. ಕಿರು ನಾಟಕದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಕ್ಕೆ ಜಾಲತಾಣಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆ ಕುರಿತಂತೆ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು 2023ರ ಫೆ.10ರಂದು ಜಯನಗರ ಸಿದ್ದಾಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿ, ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ನಂತರ ಜಾಮೀನು ಮೇಲೆ ಅವರು ಬಿಡುಗಡೆಯಾಗಿದ್ದರು.

ಈ ಪ್ರಕರಣ ರದ್ದುಪಡಿಸಲು ಕೋರಿ ಇದೀಗ ಹೈಕೋರ್ಚ್‌ ಮೆಟ್ಟಿಲೇರಿರುವ ವಿದ್ಯಾರ್ಥಿಗಳು, ಅರ್ಜಿದಾರ ವಿದ್ಯಾರ್ಥಿಗಳು ದುರುದ್ದೇಶವಿಲ್ಲದೆ ಕೇವಲ ವಿಡಂಬನಾತ್ಮಕವಾಗಿ ಕಿರು ನಾಟಕ ಪ್ರದರ್ಶಿಸಿದ್ದಾರೆ. ವಿಡಂಬ ನಾತ್ಮಕ ಸಾಹಿತ್ಯ ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದೆ. ಇದು ಕಲ್ಪನೆ, ಪರಿಕಲ್ಪನೆ, ನೀತಿ ಅಥವಾ ನಿರ್ದಿಷ್ಟವ್ಯಕ್ತಿಯನ್ನು ಹಾಸ್ಯದ ಮೂಲಕ ಟೀಕಿಸಲು ಉದ್ದೇಶಿಸಲಾಗಿದೆ. ಯಾವುದೇ ಅಭಿಪ್ರಾಯದ ವ್ಯಕ್ತಪಡಿಸುವುದನ್ನು ಸಂವಿಧಾನದ ಪರಿಚ್ಛೇದ 19ನೇ ವಿಧಿಯ ಅಡಿಯಲ್ಲಿ (ಅಭಿವ್ಯಕ್ತಿ ಸ್ವಾತಂತ್ರ್ಯ) ರಕ್ಷಿಸಲ್ಪಟ್ಟಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸ್ಕಿಟ್‌ನಲ್ಲಿ ಅಂಬೇಡ್ಕರ್‌ಗೆ ಅವಮಾನ: ಬೇಷರತ್‌ ಕ್ಷಮೆಯಾಚಿಸಿದ ಜೈನ್ ವಿವಿ

ಅಲ್ಲದೆ, ಪ್ರಕರಣ ಸಂಬಂಧ ದೂರು ದಾಖಲಿಸಲು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಿಗೆ ಯಾವುದೇ ಅಧಿಕಾರ ಇಲ್ಲ. ದೂರಿನಲ್ಲಿ ಹೇಳಿರುವಂತೆ ಅರ್ಜಿದಾರರು ಎಸ್‌ಸಿ-ಎಸ್‌ಟಿ ಸಮುದಾಯದ ಯಾ ವೊಬ್ಬರಿಗೂ ಅವಮಾನ, ಅಪಮಾನ ಹಾಗೂ ನಿಂದನೆ ಮಾಡುವ ಉದ್ದೇಶ ಹೊಂದಿರಲಿಲ್ಲ. ಆ ಸಮುದಾಯದ ಯಾವೊಬ್ಬರಿಗೆ ಅಗೌರವ ತೋರಿಲ್ಲ. ನಾಟಕವು ಸಭಾಂಗಣವೊಂದರಲ್ಲಿ ಪ್ರದರ್ಶನವಾಗಿದೆ ಹೊರತು ಸಾರ್ವ ಜನಿಕ ಪ್ರದೇಶದಲ್ಲಿ ಅಲ್ಲ. ಪ್ರಕರಣದಿಂದ ಅರ್ಜಿದಾರ ವಿದ್ಯಾರ್ಥಿಗಳು ಕಾಲೇಜಿನಿಂದ ಹೊರಹಾಕಲ್ಪಡುವ ಭೀತಿ ಎದುರಿಸುತ್ತಿದ್ದಾರೆ. ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದ್ದಾರೆ.

Follow Us:
Download App:
  • android
  • ios