Asianet Suvarna News Asianet Suvarna News

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು: ಇಂದು ಹೈಕೋರ್ಟ್‌ ತೀರ್ಪು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಎಂಬ ಆರೋಪ ಸಂಬಂಧ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ಅವರಿಗೆ ಎಸ್‌ಐಟಿ ತನಿಖಾಧಿಕಾರಿಗಳಿಂದ ಬಂಧನ ಭೀತಿ ಎದುರಾಗಿದೆ.

High Court will Announce its Verdict on Bhavani Revanna's Anticipatory Bail grg
Author
First Published Jun 18, 2024, 4:18 AM IST

ಬೆಂಗಳೂರು(ಜೂ.18): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಮಂಗಳವಾರ (ಜೂ.18) ಪ್ರಕಟಿಸಲಿದೆ.

ಭವಾನಿ ರೇವಣ್ಣ ಅವರ ಅರ್ಜಿ ಸಂಬಂಧ ಜೂ.14ರಂದು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ, ಮಂಗಳವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

ಭವಾನಿ ರೇವಣ್ಣ ಬಂಧಿಸಲು ಅನುಮತಿ ಕೊಡಿ: ಹೈಕೋರ್ಟ್‌ಗೆ ಎಸ್‌ಐಟಿ ಮನವಿ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಎಂಬ ಆರೋಪ ಸಂಬಂಧ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ಅವರಿಗೆ ಎಸ್‌ಐಟಿ ತನಿಖಾಧಿಕಾರಿಗಳಿಂದ ಬಂಧನ ಭೀತಿ ಎದುರಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ಅವರು ಮೊದಲು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಅರ್ಜಿಯನ್ನು ಜೂ.7ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಭವಾನಿ ಅವರಿಗೆ ಮಧ್ಯಂತರ ಜಾಮೀನು ನೀಡಿ, ಅವರು ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಗಳು ಭವಾನಿ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್‌ ನಿರ್ದೇಶಿಸಿತ್ತು. ಮಂಗಳವಾರ ಅರ್ಜಿ ಕುರಿತು ಅಂತಿಮ ತೀರ್ಪು ಪ್ರಕಟವಾಗಲಿದೆ. ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಭವಾನಿ ಅವರ ಪತಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.

Latest Videos
Follow Us:
Download App:
  • android
  • ios