ವಾಹನಗಳಿಗೆ ‘ಹೈ ಸೆಕ್ಯೂರಿಟಿ ರೆಜಿಸ್ಟ್ರೇಷನ್ ಪ್ಲೇಟ್’ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಕೆಲ ಖಾಸಗಿ ಕಂಪನಿಗಳ ಮಧ್ಯಂತರ ಮನವಿ ಕುರಿತು ಸೆ.19ರಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಬೆಂಗಳೂರು (ಸೆ.13) : ವಾಹನಗಳಿಗೆ ‘ಹೈ ಸೆಕ್ಯೂರಿಟಿ ರೆಜಿಸ್ಟ್ರೇಷನ್ ಪ್ಲೇಟ್’ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಕೆಲ ಖಾಸಗಿ ಕಂಪನಿಗಳ ಮಧ್ಯಂತರ ಮನವಿ ಕುರಿತು ಸೆ.19ರಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ‘ಹೈ ಸೆಕ್ಯೂರಿಟಿ ರೆಜಿಸ್ಟ್ರೇಷನ್ ಪ್ಲೇಟ್ ಮ್ಯಾನುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸೇರಿ ಕೆಲ ಸಂಸ್ಥೆಗಳು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಅವರ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
Bengaluru traffic ತಗ್ಗಿಸಲು ಶಾಲೆ, ವಾಣಿಜ್ಯ ಕಂಪನಿಗಳ ಸಮಯ ಬದಲಿಸಬಹುದೇ? ಸರ್ಕಾರಕ್ಕೆ ಹೈಕೋರ್ಟ್ ಸಲಹೆ
ಕೆಲ ಕಾಲ ಅರ್ಜಿದಾರರ ಪರ ವಕೀಲರು ವಾದಿಸಿ, ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿದರು. ಇದರಿಂದ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಸೆ.19ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ಸೆ.19ರೊಳಗೆ ಅರ್ಜಿದಾರರ ಮಧ್ಯಂತರ ಮನವಿ ಕುರಿತು ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬಹುದು ಎಂದು ಸೂಚಿಸಿತು.
ರಾಜ್ಯದಲ್ಲಿ 2019ರ ಏ.1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ‘ಮೂಲ ಉಪಕರಣ ತಯಾರಕ’ (ಓಇಎಂ) ಅದಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಲು ರಾಜ್ಯ ಸರ್ಕಾರ ಆ.17ರಂದು ಅಧಿಸೂಚನೆ ಹೊರಡಿಸಿದೆ. ಇದನ್ನು ಪ್ರಶ್ನಿಸಿರುವ ಅರ್ಜಿದಾರ ಸಂಸ್ಥೆಗಳು, ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ರಾಜ್ಯ ಸರ್ಕಾರ ಅಧಿಸೂಚನೆ ನೀಡಿದೆ. ಅರ್ಜಿದಾರ ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ದೂರಿವೆ.
ಹಾಸನ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್ ಕೊಟ್ಟ ಹೈಕೋರ್ಟ್
