ಸಿಎಂ ಸುದ್ದಿಗೋಷ್ಠಿ: ಹಾಳಾದ ಭತ್ತ ಬೆಳೆಗೆ 45 ಕೋಟಿ ರಿಲೀಸ್, ಮದ್ಯ ಬಗ್ಗೆಯೂ ಮಾತು..

ಏಪ್ರಿಲ್ 14ರ ಬಳಿಕ ಲಾಕ್‌ಡೌನ್ ಏ.30ರ ವರೆಗೆ ವಿಸ್ತರಣೆ ಪಕ್ಕಾ ಆಗಿದ್ದು, ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 13-4-2020ರಂದು ನಡೆಸಿದ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.
highlights of BSY addresses media over COVID-19 situation in Karnataka
ಬೆಂಗಳೂರು, (ಏ.13): ಲಾಕ್‌ಡೌನ್ ನಿಯಮದಲ್ಲಿ ಕೊಂಚ ಸಡಿಲಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಯಾವುದೇ ರಾಜೀ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
"

ಅಧಿಕಾರಿಗಳ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಸೋಮವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದ ಆರ್ಥಿಕ ಪರಿಸ್ಥಿತಿ‌ ಸರಿಯಿಲ್ಲ. ಅದನ್ನು ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಆರ್ಥಿಕತೆಯನ್ನು ಮತ್ತೆ ಸುಸ್ಥಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಏ. 15 ರಿಂದ ಲಾಕ್‌ಡೌನ್ 2.0 ಶುರು; ಹೇಗಿರಲಿವೆ ಹೊಸ ಗೈಡ್‌ಲೈನ್ಸ್?

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಬಿಡಿಎ ವ್ಯಾಪ್ತಿಯ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 ಬಿಡಿಎ ವ್ಯಾಪ್ತಿಯ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ನಿರ್ಧಾರ ಮಾಡಲಾಗಿದೆ. ಇದರಿಂದ ಸುಮಾರು 15 ಸಾವಿರ ಕೋಟಿ‌ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ. ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. 

ಸಿಎಂ ಸುದ್ದಿಗೋಷ್ಠಿಯ ಪ್ರಮುಖಾಂಶಗಳು
* ಬಿಡಿಎ ವ್ಯಾಪ್ತಿಯ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ನಿರ್ಧಾರ ಮಾಡಲಾಗಿದೆ. ಇದರಿಂದ ಸುಮಾರು 15 ಸಾವಿರ ಕೋಟಿ‌ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ.

* ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಎಂಎಸ್​ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಈ ಬಗ್ಗೆ ಏಪ್ರಿಲ್ 14ರ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ರು.

* ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು 45 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 

* ರಾಜ್ಯಾದ್ಯಂತ ಮತ್ತೆ ಒಂದು ವಾರ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. 

* ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ 2,834 ಕೋಟಿ ರೂಪಾಯಿ ಕೂಡಲೇ ಪಾವತಿಸಲು ಸೂಚಿಸಲಾಗಿದೆ ಎಂದು ಹೇಳಿದ್ರು.

* ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಗಿದೆ. 

* ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು
highlights of BSY addresses media over COVID-19 situation in Karnataka

1. ಇಂದು ಸಚಿವ ಸಂಪುಟದ ಸಹೋದ್ಯೋಗಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

2. ಲಾಕ್ ಡೌನ್ ಸಡಿಲಗೊಳಿಸುವ ಸಾಧ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.

3. ಪ್ರಧಾನ ಮಂತ್ರಿಯವರು ನೀಡುವ ಸೂಚನೆಗಳನ್ವಯ ಕ್ರಮ ಕೈಗೊಳ್ಳಲಾಗುವುದು.

4. ಈ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳು ಬಂದವು. ಅವುಗಳನ್ನು ನಾವು ಜಾರಿಗೊಳಿಸಲು ತೀರ್ಮಾನಿಸಲಾಯಿತು.

5. ಉದಾಹರಣೆಗೆ ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಯಿತು. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ.

6. ಇದರೊಂದಿಗೆ ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಮೂಲೆ ನಿವೇóಶನಗಳನ್ನು ಹರಾಜು ಹಾಕಲು ಚಿಂತನೆ ನಡೆಸಲಾಗುತ್ತಿದೆ.

7. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದು.

8. ಕೋವಿಡ್ 19 ರಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

9. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು.

10. ಮುಂದಿನ ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಿಸಲಾಗುವುದು.

11. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು.

12. ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು.

13. ರಾಜ್ಯದ 11 ಜಿಲ್ಲೆಗಳಲ್ಲಿ 2834 ಕೋಟಿ ರೂ. ಬಾಕಿ ಹಣವನ್ನು ರೈತರಿಗೆ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಿದರು.

14. ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಭತ್ತ ಬೆಳೆ ನಾಶವಾಗಿರುವ ಕುರಿತು ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೈತರಿಗೆ ಪರಿಹಾರ ವಿತರಣೆಗಾಗಿ 45 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
highlights of BSY addresses media over COVID-19 situation in Karnataka
Latest Videos
Follow Us:
Download App:
  • android
  • ios