ತರಗತಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು: ಸಮವಸ್ತ್ರ ಕಡ್ಡಾಯಗೊಳಿಸಿದ ಕಾಲೇಜು ಆಡಳಿತ ಮಂಡಳಿ!

ಕಾಫಿನಾಡಿನ ಪ್ರತಿಷ್ಠಿತ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆ ಬಂದಿದ್ದು ಕೂಡಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ವಿವಾದಕ್ಕೆ ತೆರೆ ಎಳೆದಿದೆ. ನಿನ್ನೆ ಪ್ರಥಮ ವರ್ಷದ ವಿದ್ಯಾರ್ಥಿನಿ ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ತರಗತಿಗೂ ಹಾಜರಾಗಿದ್ದರು. 

Hijab Controversy at Chikkamagaluru college governing body made uniform mandatory gvd

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಆ.11): ಕಾಫಿನಾಡಿನ ಪ್ರತಿಷ್ಠಿತ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆ ಬಂದಿದ್ದು ಕೂಡಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ವಿವಾದಕ್ಕೆ ತೆರೆ ಎಳೆದಿದೆ. ನಿನ್ನೆ ಪ್ರಥಮ ವರ್ಷದ ವಿದ್ಯಾರ್ಥಿನಿ ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ತರಗತಿಗೂ ಹಾಜರಾಗಿದ್ದರು. 

ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಲು ಅವಕಾಶವಿಲ್ಲ ಎಂಬ ಕೋರ್ಟ್ ಸೂಚನೆ ಇದ್ದರೂ ಹಿಜಾಬ್ ಧರಿಸಿ ವಿದ್ಯಾರ್ಥಿನಿ ಕಾಲೇಜಿಗೆ ಬಂದ ಹಿನ್ನೆಲೆ ಆ ವಿಡಿಯೋ ವೈರಲ್ ಆಗಿತ್ತು. ಕಾಲೇಜಿನಲ್ಲಿ ಕೆಲಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಕೂಡ ಭೇಟಿ ನೀಡಿದ್ದರು.  ಇದರಿಂದ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸೋಮವಾರದಿಂದ ಶನಿವಾರದವರೆಗೆ ವಾರದ ಆರು ದಿನವೂ ಕಾಲೇಜಿನ ಸಮವಸ್ತ್ರ ಧರಿಸಿ ಬರುವುದು ಕಡ್ಡಾಯ ಎಂದು ಆದೇಶ ಮಾಡಿದೆ. 

ನಿರ್ಗತಿಕರ ಆಶಾಕಿರಣ, ತನ್ನ ಸ್ವಂತ ಜಾಗವನ್ನು ಅನಾಥರಿಗಾಗಿ ಮುಡಿಪಾಗಿಟ್ಟ ಆಯಿಶಾ ಬಾನು!

ವಿದ್ಯಾರ್ಥಿಗಳು ಕಡ್ಡಾಯವಾಗಿ ಐಡಿ ಕಾರ್ಡನ್ನು ಧರಿಸಿಯೇ ಕಾಲೇಜಿಗೆ ಬರಬೇಕೆಂದು ಸೂಚನೆ ನೀಡಿದೆ. ಸಮವಸ್ತ್ರ ಹಾಗೂ ಐಡಿ ಕಾರ್ಡ್ ಧರಿಸದೆ ಬರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಆವರಣಕ್ಕೆ ಪ್ರವೇಶವಿಲ್ಲ. ಹಾಗಾಗಿ ಕಡ್ಡಾಯವಾಗಿ ಎಲ್ಲಾ ವಿದ್ಯಾರ್ಥಿಗಳು ವಾರದ ಆರು ದಿನವೂ ಸಮವಸ್ತ್ರ ಹಾಗೂ ಐಡಿ ಕಾರ್ಡ್ ಧರಿಸಿಯೇ ಕಾಲೇಜಿಗೆ ಬರಬೇಕೆಂದು ಕಟ್ಟುನಿಟ್ಟಿನ ಆದೇಶವನ್ನ ಕಾಲೇಜು ಆಡಳಿತ ಮಂಡಳಿ ಮಾಡಿದೆ.

Latest Videos
Follow Us:
Download App:
  • android
  • ios