ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ; ಸಿಡಿದೆದ್ದ ಹಿಂದೂಪರ ಸಂಘಟನೆಗಳಿಂದ ಇಂದು ಪ್ರತಿಭಟನೆ
ಅ.28, 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.

ಬೆಂಗಳೂರು (ಅ.25): ಅ.28, 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ದ ಸಿಡಿದೆದ್ದಿರುವ ಹಿಂದೂಪರ ಸಂಘಟನೆಗಳಿಂದ ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದಕ್ಕೆ ಆಕ್ರೋಶ. ಕೆಇಎ ನೀಡಿರುವ ಅವಕಾಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಗಳು. ರಾಜ್ಯ ಸರ್ಕಾರ ಕೂಡಲೇ ಆದೇಶ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾದ ಸಂಘಟನೆಗಳು.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಸರ್ಕಾರ ಅನುಮತಿ ; ಹಿಂದೂಪರ ಸಂಘಟನೆಗಳಿಂದ ಹೋರಾಟದ ಎಚ್ಚರಿಕೆ!
ಕಳೆದ ವರ್ಷ ರಾಜ್ಯದಲ್ಲಿ ನಡೆದ ಹಿಜಾಬ್ ವಿವಾದ ರಾಷ್ಟ್ರಾದ್ಯಂತ ಸುದ್ದಿಮಾಡಿತ್ತು. ಹಿಜಾಬ್ ವಿಚಾರವಾಗಿ ಕೋಮುಸಂಘರ್ಷ ಏರ್ಪಟ್ಟು ರಾಜ್ಯದ ಹಲವು ಜಿಲ್ಲೆಗಳಿಗೂ ವ್ಯಾಪಿಸಿ ಕಲ್ಲು ತೂರಾಟ ನಡೆದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟಾಗಿತ್ತು. ಇದೀಗ ಮತ್ತೆ ಹಿಜಾಬ್ ವಿಚಾರ ಮುನ್ನಲೆಗೆ ಬಂದಿರುವುದು ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಇಳಿದಿರುವುದು ಮತ್ತೊಮ್ಮೆ ಧರ್ಮ ದಂಗಲ್ ಸೃಷ್ಟಿಯಾಗುವುದೇ ಎಂಬ ಆತಂಕ ಎದುರಾಗಿದೆ.
ನಿಗಮ ಮಂಡಳಿ ಪರೀಕ್ಷೆಗೆ ಕಠಿಣ ವಸ್ತ್ರಸಂಹಿತೆ ಜಾರಿ; ಹಿಜಾಬ್ ಧರಿಸಿದ್ರೆ ತಪಾಸಣೆಗೆ 1 ಗಂಟೆ ಮುಂಚೆ ಬರಬೇಕು!