ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ವಿಜಯಪುರ (ನ.20): ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಯತ್ನಾಳ್ ಅವರು, ಹಿಂದೂಗಳ ರೇಶನ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ನಾವು ಇದರ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಲಿದ್ದೇವೆ. ಹಿಂದೂಗಳ ರೇಷನ್ ಕಡಿತ ಮಾಡುತ್ತಿರುವುದು ನನಗೂ ಮಾಹಿತಿ ಬಂದಿದೆ. ಸಾಮಾಜಿಕ ಜಾಲತಾಣದಲ್ಲೂ ಹಿಂದೂಗಳ ಬಿಪಿಎಲ್ ಕಾರ್ಡ್ ರದ್ದಾದ ವಿಚಾರ ಪ್ರಸ್ತಾಪವಾಗಿದೆ. ರದ್ದಾದ ಗ್ರಾಹಕರ ಯಾದಿ ತೆಗೆದುಕೊಳ್ತೇವೆ ಅದನ್ನ ಇಟ್ಟುಕೊಂಡು ಅಧಿವೇಶನದಲ್ಲಿ ಧರಣಿ ಮಾಡುತ್ತೇವೆ ಎಂದರು.

ಭಾರತವನ್ನ ಹಿಂದೂ ರಾಷ್ಟ್ರವಾಗಿಸಲು ನಾವು ಬಿಡುವುದಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳನ್ನ ಟಾರ್ಗೆಟ್ ಮಾಡುತ್ತಿದೆ. ಆ ಸಿದ್ದರಾಮಯ್ಯನೇ ಹಿಂದೂಗಳ ಓಟು ಬೇಡ ಎಂದಿದ್ದಾರೆ. ಹೀಗಾಗಿ ಈಗ ಅನರ್ಹತೆ ನೆಪದಲ್ಲಿ ಹಿಂದೂಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡಿ ರದ್ದು ಮಾಡುತ್ತಿದೆ. ಯಾರಿಗೆ ಅನ್ಯಾಯವಾಗಿದೆ ಅವರ ಪರವಾಗಿ ನಾವು ಸದನದಲ್ಲಿ ಧ್ವನಿ ಎತ್ತುತ್ತೇವೆ. ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಪ್ಯಾನ್ ಕಾರ್ಡ್ ಅಪ್ಲಿಕೇಶನ್ ಹಾಕಿದವರ ರೇಷನ್ ಕಾರ್ಡ್ ರದ್ದಾಗಿವೆ. ಇವರ ಟಾರ್ಗೆಟ್ ಹಿಂದೂಗಳಾಗಿದ್ದಾರೆ. ಓಟು ಹಾಕಿಲ್ಲದ ಹಿಂದೂಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಹಿಂದೂಗಳನ್ನ ತುಳಿಯಬೇಕು ಎಂದು ಹೀಗೆ ಮಾಡುತ್ತಿದ್ದಾರೆ. ನಾವು ಹಿಂದೂಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಮುಂದಿನ ಹೋರಾಟವನ್ನು ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.