ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು : ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Add Asianetnews Kannada as a Preferred SourcegooglePreferred

ಭಿಗಿ ಭದ್ರತೆ : ಈ ಹಿಂದೆ ಸಿದ್ಧಗಂಗಾ ಮಠದ ಸುತ್ತಮುತ್ತ ಪೊಲೀಸ್ ಭಿಗಿಭದ್ರೆಯನ್ನುಹೆಚ್ಚಿಸಲಾಗಿದ್ದು, ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ. ತುಮಕೂರು ನಗರದಾದ್ಯಂತ 20 ಸಾವಿರ ಪೊಲೀಸರ ನಿಯೋಜಿಸಿದ್ದಲ್ಲದೇ, ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಿದ್ದಗಂಗಾ ಮಠಕ್ಕೆ ಎಸ್ ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ 10 ಪಿಎಸ್‌ಐ, 150 ಸಿವಿಲ್ ಪೇದೆಗಳು, 4 ಡಿಆರ್ ತುಕಡಿಯನ್ನು ಬಂದೊಬಸ್ತ್‌ಗಾಗಿ ನಿಯೋಜಿಸಲಾಗಿದೆ.

ತುಮಕೂರು, ಬೆಂಗಳೂರು ಗ್ರಾಮಾಂತರ, ದೊಡ್ಡ ಬಳ್ಳಾಪುರ, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಮಾರ್ಗಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.