Coronavirus in Karnataka: ಲಾಕ್‌ಡೌನ್‌ ಬಗ್ಗೆ ಹೇಳಿ ಉಲ್ಟಾ ಹೊಡೆದ ಸಚಿವ ಜ್ಞಾನೇಂದ್ರ

*   ಕೋವಿಡ್‌ ಸೋಂಕು ತಡೆಗಟ್ಟಲು ಸರ್ಕಾರದಿಂದ ಎಲ್ಲ ರೀತಿಯ ಪ್ರಯತ್ನ
*   ಕೊರೋನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಪರಿಹಾರವಲ್ಲ
*   ಪಾದಯಾತ್ರೆಯಿಂದ ಲಾಕ್‌ಡೌನ್‌ ಜಾರಿಯಾದರೆ ಕಾಂಗ್ರೆಸ್‌ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಗೃಹ ಸಚಿವ
 

Home Minister Araga Jnanendra React on Lockdown in Karnataka grg

ಬೆಂಗಳೂರು(ಜ.12): ಕಾಂಗ್ರೆಸ್‌ ಪಾದಯಾತ್ರೆಯಿಂದ(Congress Padayatra)  ಲಾಕ್‌ಡೌನ್‌(Lockdown) ಆಗುವ ಪರಿಸ್ಥಿತಿ ಎದುರಾಗಬಹುದು, ಲಾಕ್‌ಡೌನ್‌ ಜಾರಿಯಾದರೆ ಕಾಂಗ್ರೆಸ್‌(Coongress) ನಾಯಕರೇ ಕಾರಣ ಎಂದು ಹೇಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅವರು ಕೆಲ ಸಮಯದ ಬಳಿಕ ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಪರಿಹಾರವಲ್ಲ. ಲಾಕ್‌ಡೌನ್‌ ಮಾಡುವುದೂ ಇಲ್ಲ ಎಂದು ಉಲ್ಟಾಹೊಡೆದಿದ್ದಾರೆ.
ಮಂಗಳವಾರ ಬೆಳಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌(Covid19) ಸೋಂಕನ್ನು ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಆದರೆ ಕಳೆದ ಹಲವು ದಿನಗಳಿಂದ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಕೈಮೀರಿದರೆ ಲಾಕ್‌ಡೌನ್‌ ಅನಿವಾರ್ಯ. ಪಾದಯಾತ್ರೆಯಿಂದ ಲಾಕ್‌ಡೌನ್‌ ಜಾರಿಯಾದರೆ ಕಾಂಗ್ರೆಸ್‌ ಕಾರಣ ಎಂದು ವಾಗ್ದಾಳಿ ನಡೆಸಿದರು.

ನಂತರ ವಿಕಾಸಸೌಧದಲ್ಲಿ ಮಾತನಾಡಿ, ಪರಿಸ್ಥಿತಿ ವಿಕೋಪಕ್ಕೆ ಹೋದರೆ ಕೆಲ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಲಾಕ್‌ಡೌನ್‌ ಪರಿಹಾರ ಅಲ್ಲ. ಸೋಂಕು ಉಲ್ಬಣವಾದ ತಕ್ಷಣ ಲಾಕ್‌ಡೌನ್‌ ಮಾಡುವ ಯೋಚನೆ ಇಲ್ಲ. ಮುಖ್ಯಮಂತ್ರಿಗಳು ಸಹ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ(Central Government)ಸೂಚನೆಯನ್ನು ಅನುಸರಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Weekend Curfew Bengaluru : 944 ವಾಹನ ಖಾಕಿ ವಶಕ್ಕೆ: ಗೃಹ ಸಚಿವ ಆರಗರಿಂದ ಖುದ್ದು ಭದ್ರತೆ ಪರಿಶೀಲನೆ!

ವಾರಂತ್ಯದ ಕರ್ಫ್ಯೂನಲ್ಲಿ(Weekend Curfew) ಬೀದಿ ವ್ಯಾಪಾರಿಗಳು, ಹೊಟೇಲ್‌ ಉದ್ಯಮಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಲಾಕ್‌ಡೌನ್‌ನಿಂದ ಬಡವರಿಗೆ, ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸರ್ಕಾರಕ್ಕೆ(Government of Karnataka) ಲಾಕ್‌ಡೌನ್‌ ಮಾಡುವ ಇರಾದೆ ಏನೂ ಇಲ್ಲ. ಪರಿಸ್ಥಿತಿ ಕೈತಪ್ಪುವ ಸ್ಥಿತಿಗೆ ಬಂದಾಗ ಲಾಕ್‌ಡೌನ್‌ ಮಾಡುವುದು ಅದೊಂದು ವಿಧಾನ ಅಷ್ಟೆ. ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ ಎಂದ ಅವರು, ಕೋವಿಡ್‌ ಸೋಂಕಿನ ನಡುವೆಯೂ ಪಾದಯಾತ್ರೆ ಕೈಗೊಳ್ಳುವುದರ ಮೂಲಕ ಕಾಂಗ್ರೆಸ್‌ ನಾಯಕರು ಜನರ ಬದುಕಿನ ಜತೆ ಚೆಲ್ಲಾಟವಾಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು. ಆದರೆ, ನಮ್ಮ ಆತಂಕ ಇರುವುದು ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವುದಾಗಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್, ಇಂದಿನಿಂದಲೇ ಜಾರಿಗೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು(Coronavirus) ಹೆಚ್ಚಳವಾಗುತ್ತಿರುವುದರಿಂದ ಸರ್ಕಾರ ಹೊಸ ಟಫ್ ರೂಲ್ಸ್‌ಗಳನ್ನ ಜಾರಿಗೆ ತಂದಿದೆ.

ಕರ್ನಾಟಕದಲ್ಲಿ (Karnataka) ಕೊರೋನಾ ಸೋಂಕಿನ 3ನೇ ಅಲೆ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ನಿನ್ನೆ(ಮಂಗಳವಾರ) ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯಿತು. ಕೊರೋನಾ ಸೋಂಕು ತಡೆಗೆ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಆದೇಶ ಇಂದಿನಿಂದಲೇ (ಜ.12) ಜಾರಿಗೆ ಬರಲಿದೆ.

Covid In Karnataka: 'ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲೇ ಐಸೋಲೇಷನ್‌'

ಕರ್ನಾಟಕದ ವಿವಿಧೆಡೆ ವಸತಿ ಶಾಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಶಾಲೆಗಳನ್ನು ಬಂದ್ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. 

ವೈಕುಂಠ ಏಕಾದಶಿಯಂದು ಸಂಪ್ರದಾಯದಂತೆ ದೇಗುಲಗಳಲ್ಲಿ ಪೂಜೆಗೆ ಅವಕಾಶವಿದೆ. ಆದರೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮ ಜಾರಿಗೊಳಿಸಲಾಗಿದೆ. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ಮಕ್ಕಳ ವಾರ್ಡ್‌, ಬೆಡ್‌ಗಳನ್ನು ಮೀಸಲಿಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿಯೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಗೃಹ ಸಚಿವರು ವಿವರಿಸಿದರು. ಕಳೆದ ಬಾರಿಯಂತೆ ಈ ಮಾರುಕಟ್ಟೆಗಳನ್ನು ವಿಕೇಂದ್ರೀಕರಣ ಮಾಡಲು ನಿರ್ಧರಿಸಲಾಗಿದೆ.  ಮಾರುಕಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
 

Latest Videos
Follow Us:
Download App:
  • android
  • ios