Asianet Suvarna News Asianet Suvarna News

ನಾಗಮಂಗಲ: ಕೋಮುಗಲಭೆ ಅಲ್ಲ, ಆಕಸ್ಮಿಕ ಘಟನೆ, ಪರಮೇಶ್ವರ್‌

ಇಂತಹ ಘಟನೆಗಳು ನಡೆಯಬಾರದಿತ್ತು. ಈ ಘಟನೆ ಆಕಸ್ಮಿಕವಾಗಿದ್ದು, ದೊಡ್ಡ ಪ್ರಮಾಣದ ಅನಾಹುತ, ಗಾಯಗಳಾಗಲೀ ಆಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಆದ್ದರಿಂದ ಗಲಭೆ ಆರಂಭವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ನಿಯಂತ್ರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್‌ 

Home Minister Dr G Parameshwar React to Nagamangala Riot grg
Author
First Published Sep 13, 2024, 7:20 AM IST | Last Updated Sep 13, 2024, 11:01 AM IST

ಬೆಂಗಳೂರು(ಸೆ.13):  ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಘಟನೆ ಒಂದು ಆಕಸ್ಮಿಕ. ಈ ಘಟನೆ ನಡೆಯಬಾರದಿತ್ತು. ಈ ಗಲಾಟೆ ಸಣ್ಣ ಪ್ರಮಾಣದಲ್ಲಿ ಇರುವಾಗಲೇ ಅಂತ್ಯವಾಗಿದ್ದು, ಪ್ರಕರಣದ ಸಂಬಂಧ 52 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯಬಾರದಿತ್ತು. ಈ ಘಟನೆ ಆಕಸ್ಮಿಕವಾಗಿದ್ದು, ದೊಡ್ಡ ಪ್ರಮಾಣದ ಅನಾಹುತ, ಗಾಯಗಳಾಗಲೀ ಆಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಆದ್ದರಿಂದ ಗಲಭೆ ಆರಂಭವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ನಿಯಂತ್ರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ ಎಂದರು.

ಸರ್ಕಾರದ ಕಾರ್ಯಕ್ರಮ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಗೃಹ ಸಚಿವ ಪರಮೇಶ್ವರ

ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರಿಗೆ ಘರ್ಷಣೆ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿ ಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಹತೋಟಿಗೆ ತೆಗೆದುಕೊಂಡಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯವಾಗಿದ್ದು, ಕೋಮುಗಲಭೆ ಅಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ, ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಿದ್ದಾರೆ, ಬೆಂಕಿ ಹಾಕಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗು ಕಲ್ಲು ಏಟು ಬಿದ್ದಿದ್ದು, ಓರ್ವ ಎಎಸ್‌ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ ಎಂದು ಹೇಳಿದರು. 

Latest Videos
Follow Us:
Download App:
  • android
  • ios