Asianet Suvarna News Asianet Suvarna News

ಪೊಲೀಸರ ತಲೆ ಕಡೀತೇವೆ ಅನ್ನುವವರ ಬಿಡಲ್ಲ: ಸಚಿವ ಪರಮೇಶ್ವರ್

ಡಿಜೆ ಹಳ್ಳಿ ರೀತಿ ಗಲಭೆಗೆ ಪ್ರಯತ್ನಿಸಿದ ಎನ್ನಲಾಗಿದೆ. ಪೊಲೀಸರು ತಕ್ಷಣ ಟಿಯರ್ ಗ್ಯಾಸ್ ಸಿಡಿಸಿದ್ದಾರೆ. ಸಹಜವಾಗಿ ಕಲ್ಲು ತೂರಾಟದಿಂದ ಪೊಲೀಸರಿಗೂ ಗಾಯಗಳು ಆಗಿವೆ. ಏನು ಬೇಕಾದರೂ ಮಾಡಬಹುದು ಎಂಬುವವರನ್ನು ನಾವು ಬಿಡುವುದಿಲ್ಲ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ 

Home Minister Dr G Parameshwar Talks Over Karnataka Police grg
Author
First Published May 26, 2024, 6:30 AM IST

ಬೆಂಗಳೂರು(ಮೇ.26): ಚನ್ನಗಿರಿಯಲ್ಲಿ ವ್ಯಕ್ತಿಯನ್ನು ಬಂಧಿಸಿದ ಏಳು ನಿಮಿಷದಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಣೆಯಲ್ಲಿ ಕಾರಣ ತಿಳಿದುಬರುತ್ತದೆ. ಆದರೆ ಪೊಲೀಸ್ ಠಾಣೆಗೆ ಬಂದು ಧಮ್ಮಿ ಕಡೆಯುತ್ತೇವೆ ಎನ್ನುವವರನ್ನು ಆಗುವುದಿಲ್ಲ. ಅಂತಹವರ ಮೇಲೆ ಮುಲಾಜಿಲ್ಲದೇ ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿ ರುವುದನ್ನು ಲಾಕಪ್ ಡೆತ್ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿ ಮೇಲೆ ದೂರು ಬಂದಿದ್ದರಿಂದ ಪೊಲೀಸರು ವಿಚಾರಣೆಗೆ ಕರೆ ತಂದಿದ್ದರು. ಏಳು ನಿಮಿಷದಲ್ಲಿ ಆರೋಗ್ಯದಲ್ಲಿ ಸಮಸ್ಯೆಯಾಗಿ ತೀರಿಕೊಂಡಿದ್ದಾರೆ. ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಅಂತ ತಿಳಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಇಂತಹ ಘಟನೆ ಗಳನ್ನು ಸಹಿಸಲು ಸಾಧ್ಯವಿಲ್ಲ. ಎಂದು ಸ್ಪಷ್ಟಪಡಿಸಿದರು.

NEWS HOUR: ಡಿಜೆ ಹಳ್ಳಿ, ಕೆಜಿ ಹಳ್ಳಿ ನೆನಪಿಸಿದ ಚನ್ನಗಿರಿ ಗಲಭೆ , ಪೊಲೀಸರ ಮೇಲೆ ಪುಂಡರ ದಾಳಿ!

ಡಿಜೆ ಹಳ್ಳಿ ರೀತಿ ಗಲಭೆಗೆ ಪ್ರಯತ್ನಿಸಿದ ಎನ್ನಲಾಗಿದೆ. ಪೊಲೀಸರು ತಕ್ಷಣ ಟಿಯರ್ ಗ್ಯಾಸ್ ಸಿಡಿಸಿದ್ದಾರೆ. ಸಹಜವಾಗಿ ಕಲ್ಲು ತೂರಾಟದಿಂದ ಪೊಲೀಸರಿಗೂ ಗಾಯಗಳು ಆಗಿವೆ. ಏನು ಬೇಕಾದರೂ ಮಾಡಬಹುದು ಎಂಬುವವರನ್ನು ನಾವು ಬಿಡುವುದಿಲ್ಲ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

Latest Videos
Follow Us:
Download App:
  • android
  • ios