ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಸತ್ಯಾಸತ್ಯ ಹೊರಗೆ ಬರಬೇಕಾದರೆ ನ್ಯಾಯಾಂಗ ತನಿಖೆ ಆಗಬೇಕು. ಶುಕ್ರವಾರವಷ್ಟೆ ಈ ಸಂಬಂಧ ಆದೇಶ ಮಾಡಿದ್ದೇವೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮುರ್ತಿ ವೀರಪ್ಪ ಅವರ ನೇತೃತ್ವದ ಏಕ ಸದಸ್ಯತ್ವದಲ್ಲಿ ತನಿಖೆ ನಡೆಯಲಿದೆ. ಸತ್ಯಾಸತ್ಯ ಹೊರಬರುವ ಸಂಪೂರ್ಣ ವಿಶ್ವಾಸವಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಬೆಂಗಳೂರು(ಜು.23): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸತ್ಯಾಸತ್ಯಗಳೇನು ಎಂಬುದನ್ನು ಹೊರತರುವ ಉದ್ದೇಶದಿಂದ ನಮ್ಮ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂಬುದು ಕಾಂಗ್ರೆಸ್‌ ಪ್ರತಿಪಕ್ಷದಲ್ಲಿದ್ದಾಗ ಆಗ್ರಹವಾಗಿತ್ತು. ಆದರೆ, ಹಿಂದಿನ ಬಿಜೆಪಿ ಸರ್ಕಾರ ವಹಿಸಿರಲಿಲ್ಲ. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಸತ್ಯಾಸತ್ಯ ಹೊರಗೆ ಬರಬೇಕಾದರೆ ನ್ಯಾಯಾಂಗ ತನಿಖೆ ಆಗಬೇಕು. ಶುಕ್ರವಾರವಷ್ಟೆ ಈ ಸಂಬಂಧ ಆದೇಶ ಮಾಡಿದ್ದೇವೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮುರ್ತಿ ವೀರಪ್ಪ ಅವರ ನೇತೃತ್ವದ ಏಕ ಸದಸ್ಯತ್ವದಲ್ಲಿ ತನಿಖೆ ನಡೆಯಲಿದೆ. ಸತ್ಯಾಸತ್ಯ ಹೊರಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ಅಮೃತ್‌ ಪಾಲ್‌ ವಿರುದ್ಧ ಕ್ರಮಕ್ಕೆ ಕೇಂದ್ರ ಅಸ್ತು

ಇದಕ್ಕೂ ಮುನ್ನ ಸಚಿವ ಪ್ರಯಾಂಕ್‌ ಖರ್ಗೆ ಅವರು ಪರಮೇಶ್ವರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇದ್ದ ಒಂದಷ್ಟುದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆಯೂ ಪ್ರತಿಪಕ್ಷದಲ್ಲಿದ್ದಾಗ ಪ್ರಿಯಾಂಕ್‌ ಖರ್ಗೆ ಅವರು ಸುದ್ದಿಗೋಷ್ಠಿ ನಡೆಸಿ ಪ್ರಕರಣ ಸಂಬಂಧ ಹಲವು ಆರೋಪ, ದಾಖಲೆಗಳ ಬಿಡುಗಡೆ ಮಾಡಿದ್ದರು.