ಹುಕ್ಕಾ ನಿಷೇಧ ಕ್ರಮ ಒಳ್ಳೆಯದು: ಹೈಕೋರ್ಟ್‌

ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿರುವ ಅರ್ಜಿ ಸಂಬಂಧ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. 

Hookah ban is good Says karnataka High Court gvd

ಬೆಂಗಳೂರು (ಮಾ.13): ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿರುವ ಅರ್ಜಿ ಸಂಬಂಧ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ, ಹತ್ತಿಪ್ಪತ್ತು ವರ್ಷಗಳ ಹಿಂದೆ ನಿಯಂತ್ರಣ ಅಥವಾ ನಿಷೇಧ ಎಲ್ಲಿತ್ತು? ಅತಿರೇಕಕ್ಕೆ ಹೋದ ಬಳಿಕ ಎಚ್ಚೆತ್ತಿದ್ದೀರಾ ಎಂದು ಪ್ರಶ್ನಿಸಿ ತಡವಾದರೂ ಕ್ರಮ ವಹಿಸಿದ್ದು ಒಳ್ಳೆಯದು ಎಂದಿತು.

ಅರ್ಜಿದಾರರ ಪರ ಹಿರಿಯ ವಕೀಲ ಕೆ. ಸುಮನ್‌ ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯಿದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ’ ಎಂದರು.

ಇದಕ್ಕೆ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್ ಕೆ. ಶಶಿಕಿರಣ್‌ ಶೆಟ್ಟಿ ‘ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರಕ್ಕೆ ಕ್ರಮ ಕೈಗೊಳ್ಳುವ ಹೊಣೆಗಾರಿಕೆ ಇದೆ’ ಎಂದರು. ಇದಕ್ಕೆ ಅರ್ಜಿದಾರರ ಪರ ಮತ್ತೊಬ್ಬ ವಕೀಲರು ಹುಕ್ಕಾ, ಅಮಲು ಪಾನೀಯ ಅಥವಾ ಮಾದಕ ವಸ್ತುವಲ್ಲ. 

ಕಿರಾತಕ ಎಚ್‌ಡಿಕೆಯೇ ವಿನಃ ನಮ್ಮ ನಾಯಕರಲ್ಲ!: ಶಾಸಕ ಇಕ್ಬಾಲ್ ಹುಸೇನ್

ಒಮ್ಮೆ ಹುಕ್ಕಾ ನಿಷೇಧಿಸಿದರೆ ಅವರು ಸಿಗರೇಟು ಸೇದಲಿದ್ದಾರೆ. ಹುಕ್ಕಾದಲ್ಲಿ ಕನಿಷ್ಠ ಹರ್ಬಲ್‌ ಸಾರ ಸೇದುತ್ತಾರೆ.. ಆದರೆ, ಯಾವುದೇ ತೆರನಾದ ಹರ್ಬಲ್‌ ಸಿಗರೇಟು ಇಲ್ಲ’ ಎಂದರು. ಶಶಿಕಿರಣ್‌ ಶೆಟ್ಟಿ ವಾದಿಸಿ. ‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಹುಕ್ಕಾ ನಿಷೇಧಿಸಲಾಗಿದೆ. ಹುಕ್ಕಾ ನಿಷೇಧ ಕುರಿತು ಅಧಿಸೂಚನೆ ಜತೆಗೆ ಮಸೂದೆಯನ್ನೂ ಪಾಸ್‌ ಮಾಡಲಾಗಿದೆ. ಹುಕ್ಕಾ ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಹಾಗೆಂದು ನಾವು ಸಿಗರೇಟು ಬಳಕೆಗೆ ಆದ್ಯತೆ ನೀಡುತ್ತಿಲ್ಲ’ ಎಂದರು.

Latest Videos
Follow Us:
Download App:
  • android
  • ios