ಅಹಮದಾಬಾದ್‌ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ!| ಟ್ರಂಪ್‌ಗೆ ಆರ್ಥಿಕ ಕುಸಿತ ಕಾಣದಂತೆ ಯಾವ ಗೋಡೆ ಕಟ್ತೀರಿ?: ಎಚ್‌ಡಿಕೆ ವ್ಯಂಗ್ಯ|

ಬೆಂಗಳೂರು[ಫೆ.19]: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತಕ್ಕೆ ಬಂದಾಗ ಅಹಮದಾಬಾದ್‌ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ, ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

Add Asianetnews Kannada as a Preferred SourcegooglePreferred
Scroll to load tweet…
Scroll to load tweet…

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ದೇಶವ್ಯಾಪಿ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ ಎಂದು ಅವರು ಮಂಗಳವಾರ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.