ಬೆಂಗಳೂರು(ಜು.26): ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ ಜಾರಿ ಮಾಡಿರುವ ಪರಿಣಾಮ ಜು.28ರಂದು ಬೆಂಗಳೂರಿನಿಂದ ಹೊರಡುವ ಹಾಗೂ ಜು.29 ರಂದು ಹೌರಾದಿಂದ ಹೊರಡುವ ಎರಡು ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಜು.28ರಂದು ಯಶವಂತಪುರ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು (ರೈಲು ಸಂಖ್ಯೆ 02246) ಹಾಗೂ ಜು.29ರಂದು ಹೌರಾದಿಂದ ಹೊರಡಬೇಕಿದ್ದ ಹೌರಾ-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು (02245)ಸಂಚಾರ ರದ್ದುಪಡಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

ಬೆಂಗಳೂರು: 13 ಮಂದಿ ರೈಲ್ವೆ ಪೊಲೀಸರಿಗೆ ಕೊರೋನಾ ಪಾಸಿಟಿವ್‌

ಕೊರೋನಾ ವೈರಸ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇವೆ. ಹೀಗಾಗಿ ಪಶ್ಚಿಮ ಬಂಗಾಳ ಸರ್ಕಾರ ಮತ್ತೆ ಲಾಕ್‌ಡೌನ್‌ಗೆ ಆದೇಶಿಸಿದೆ. ಹೀಗಾಗಿ ಹೌರಾದಿಂದ ಹೊರಡುವ ಎರಡು ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.