Asianet Suvarna News Asianet Suvarna News

ಅಂಕೋಲಾ ರೈಲು: ಸಮೀಕ್ಷೆಗೆ ಹುಲಿ ಪ್ರಾಧಿಕಾರದ ಅನುಮತಿ ಕಡ್ಡಾಯ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣದಿಂದ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂಕುಲದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮೀಕ್ಷೆ ಕೈಗೊಳ್ಳುವ ಮುನ್ನ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ ಅನುಮೋದನೆ ಪಡೆಯುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಚ್‌ ನಿರ್ದೇಶಿಸಿದೆ. 

Hubballi Ankola rail line Wildlife board can get necessary approvals says HC gvd
Author
Bangalore, First Published Apr 21, 2022, 3:03 AM IST

ಬೆಂಗಳೂರು (ಏ.21): ಹುಬ್ಬಳ್ಳಿ-ಅಂಕೋಲಾ ರೈಲು (Hubballi Ankola Rail) ಮಾರ್ಗ ನಿರ್ಮಾಣದಿಂದ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂಕುಲದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮೀಕ್ಷೆ ಕೈಗೊಳ್ಳುವ ಮುನ್ನ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ ಅನುಮೋದನೆ ಪಡೆಯುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ (High Court) ನಿರ್ದೇಶಿಸಿದೆ. ಹುಬ್ಬಳ್ಳಿ-ಅಂಕೋಲಾ ನಡುವೆ 164.44 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಕರ್ನಾಟಕ ವನ್ಯಜೀವಿ ಮಂಡಳಿ ನೀಡಿರುವ ಅನುಮತಿ ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಫೌಂಡೇಷನ್‌ ಮತ್ತು ಗಿರಿಧರ್‌ ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು, ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿದ್ದವು.

ಕೇಂದ್ರ ಸರ್ಕಾರ ಮತ್ತು ಅರ್ಜಿದಾರರ ವಾದ ಆಲಿಸಿ ಬಳಿಕ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣದಿಂದ ವನ್ಯಜೀವಿ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮೀಕ್ಷೆ ನಡೆಸಬೇಕು. ಅದಕ್ಕೂ ಮುನ್ನ ಅಗತ್ಯವಿದ್ದರೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಯಿಂದ ಅನುಮೋದನೆ ಪಡೆಯಬೇಕು. ಮುಂದಿನ ವಿಚಾರಣೆ ವೇಳೆ ಈ ವಿಚಾರದಲ್ಲಿ ಕೈಗೊಂಡ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಹಳಿತಪ್ಪಿದ ಚಾಲುಕ್ಯ ಎಕ್ಸ್‌ಪ್ರೆಸ್‌: ಮುಂಬೈ-ಗದಗ ರೈಲಿಗೆ ಡಿಕ್ಕಿ!

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ 595 ಹೆಕ್ಟೇರ್‌ ಅರಣ್ಯ ಪ್ರದೇಶ ಬಳಕೆ ಮಾಡಲು ಅನುಮತಿ ನೀಡಿ ಕರ್ನಾಟಕ ವನ್ಯಜೀವಿ ಮಂಡಳಿಯು 2020ರ ಮಾ.20ರಂದು ಆದೇಶಿಸಿದೆ. ಇದರಿಂದ ಅಮೂಲ್ಯ ಹಾಗೂ ಅಪಾರ ಪ್ರಮಾಣದಲ್ಲಿ ಅರಣ್ಯ ಸಂಪತ್ತು ನಾಶವಾಗಲಿದೆ. ಜತೆಗೆ, ವನ್ಯಜೀವಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಜತೆಗೆ, ಯೋಜನೆಗೆ ಕರ್ನಾಟಕ ವನ್ಯಜೀವಿ ಮಂಡಳಿ ನೀಡಿರುವ ಅನುಮತಿ ರದ್ದುಪಡಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಶಿವಮೊಗ್ಗ ತಿರುಪತಿ- ಚೆನ್ನೈ ಹೊಸ ರೈಲು: ನೈಋುತ್ಯ ರೈಲ್ವೆಯು (South Western Railway) ಶಿವಮೊಗ್ಗದಿಂದ (Shivamogga) ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ(Chennai) ಹೋಗುವ ಹೊಸ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮೆಟ್ರೋಪಾಲಿಟನ್‌ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ. ವಾರದಲ್ಲಿ ಎರಡು ದಿನ ಹೊರಡುವ ವಿಶೇಷ ರೈಲಿನ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಟೌನ್‌ ರೈಲು ನಿಲ್ದಾಣದಲ್ಲಿ ಇಂದು(ಭಾನುವಾರ) ಸಂಜೆ 6 ಗಂಟೆಗೆ ಹಸಿರು ಬಾವುಟ ತೋರಿಸುವ ಮೂಲಕ ನೆರವೇರಿಸುವರು.

ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ(Tirupati) ನೇರ ರೈಲು ಸಂಪರ್ಕದ ಬೇಡಿಕೆಯನ್ನು ನ. 2019 ರಲ್ಲಿ ಪೂರೈಸಿದ್ದು, ಕೋವಿಡ್‌(Covid-19) ಕಾರಣದಿಂದಾಗಿ ಈ ರೈಲುಗಳ(Railway) ಸೇವೆಗಳನ್ನು ಕೊನೆಗೊಳಿಸಲಾಗಿತ್ತು. ಆದರೆ ರೈಲು ಸಂಪರ್ಕ ಸೇವೆಯ ಹೆಚ್ಚಿನ ಬೇಡಿಕೆ ಇದ್ದ ಕಾರಣ ಮೆಟ್ರೋಪಾಲಿಟನ್‌ ನಗರವಾದ ಚೆನ್ನೈ ಮತ್ತು ಯಾತ್ರಿಕ ತಾಣವಾದ ತಿರುಪತಿ (ರೇಣಿಗುಂಟ)ಗಳಿಗೆ ರೈಲನ್ನು ಮರು ಪ್ರಾರಂಭಿಸಲು ಲೊಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರ ಬೇಡಿಕೆಯಿಂದ ಈಗ ನೈಋುತ್ಯ ರೈಲ್ವೆಯ ಮೈಸೂರು ವಿಭಾಗವು ಹೊಸ ರೈಲನ್ನು ಪ್ರಾರಂಭಿಸಲು ರೈಲ್ವೆ ಸಚಿವಾಲಯದ ಒಪ್ಪಿಗೆಯನ್ನು ಪಡೆಯಲು ಯಶಸ್ವಿಯಾಗಿದೆ.

ಟ್ರ್ಯಾಕ್ ನ ಮಧ್ಯೆ ಮಲಗಿದ್ದ ಮಹಿಳೆಯ ಮೇಲೆ ಹಾದು ಹೋದ ರೈಲು, ಆಕೆಯ ಪ್ರತಿಕ್ರಿಯೆ ಕಂಡು ನೆಟಿಜನ್ಸ್ ಗಳ ಅಚ್ಚರಿ!

ರೈಲು ಗಾಡಿ ಸಂ. 06223/06224 ಎರಡು ಎಸ್‌.ಎಲ್‌.ಆರ್‌.ಡಿ., ನಾಲ್ಕು ಸಾಮಾನ್ಯ ಕೋಚ್‌ಗಳು, ಆರು ಸ್ಲೀಪರ್‌ ಕೋಚ್‌ಗಳು, ಒಂದು ಎರಡನೆಯ ದರ್ಜೆ ಹವಾನಿಯಂತ್ರಿತ ಮತ್ತು ಒಂದು ಮೂರನೆಯ ದರ್ಜೆ ಹವಾ ನಿಯಂತ್ರಿತ ಕೋಚ್‌ಗಳನ್ನು ಒಳಗೊಂಡಿರುವ ಸಂಯೋಜನೆಯ 14 ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿರುತ್ತದೆ. ವಿಶೇಷ ಎಕ್ಸ್‌ಪ್ರೆಸ್‌ ರೈಲು ಗಾಡಿ ಸಂಖ್ಯೆ. 06223 17.04.2022 ರಿಂದ 28.06.2022 ರವರೆಗೆ (22 ಸಂಚಾರಗಳು) ವಾರದಲ್ಲಿ ಎರಡು ದಿನ ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಹೊರಟು ರೇಣಿಗುಂಟಾ (ತಿರುಪತಿ) ಮಾರ್ಗವಾಗಿ ಪುರಚಿ ತಲೈವರ್‌ ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌ ನಿಲ್ದಾಣ ತಲುಪುವುದು.

Follow Us:
Download App:
  • android
  • ios