ಬಂದ್ ನಡುವೆ ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಶಿಫಾರಸು!
ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ವಿರೋಧಿಸಿ ಇಂದು ಬೆಂಗಳೂರು ಬಂದ್ ನಡೆಸಲಾಗಿದೆ. ಇದರ ನಡುವೆ ಕರ್ನಾಟಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸು ಮಾಡಲಾಗಿದೆ.

ಬೆಂಗಳೂರು(ಸೆ.26) ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಯಾಾಗಿದೆ. ಬೆಂಗಳೂರು ಬಂದ್ ನಡೆಸಿ ತೀವ್ರ ಆಕ್ರೋಶ ಹೊರಹಾಕಿದರೂ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದೆ. ಕರ್ನಾಟಕ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ಪ್ರತಿ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಮುಂದಿನ 18 ದಿನ ತಮಿಳುನಾಡಿಗೆ ನೀರು ಬಿಡಲು ಆದೇಶ ನೀಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಿರುದ್ದ ಆದೇಶ ಹೊರಬೀಳುತ್ತಿದ್ದಂತೆ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಎರಡು ಬಂದ್‌ಗೆ ಕರೆ ನೀಡಿದೆ. ಇಂದು ಬೆಂಗಳೂರು ಬಂದ್ ನಡೆಸಲಾಗಿದೆ. ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇಂದಿನ ಬೆಂಗಳೂರು ಬಂದ್ ಬಹುತೇಕ ಯಶಸ್ವಿಯಾಗಿದೆ. ಈ ಬಂದ್ ನಡುವೆಯೇ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶ ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ.
ಕಾವೇರಿ ಬಗ್ಗೆ ಪೂರ್ಣಚಂದ್ರ ತೇಜಸ್ವಿ ಹೇಳಿದ್ದ ಮಾತುಗಳು, ಈಗಲಾದರೂ ಅರ್ಥಮಾಡಿಕೊಳ್ಳುತ್ತಾ ಕರ್ನಾಟಕ?
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದಿಂದ ಕಾವೇರಿ ಬರಿದಾಗಲಿದೆ. ಇವತ್ತಿನ ಆದೇಶದಿಂದ ಕೇವಲ 2.5 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಉಳಿಯಲಿದೆ. ಇದರಲ್ಲಿ 2 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿರುವುದಿಲ್ಲ. ಹೀಗಾಗಿ ಅಕ್ಟೋಬರ್ ಆರಂಭದಿಂದಲೇ ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಭಾಗದಲ್ಲಿ ನೀರಿನ ಕೊರತೆ ಕಾಡಲಿದೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಲಿದೆ.
ಕಾವೇರಿ ನದಿ ನೀರು ನಿಯಂತ್ರ ಮಂಡಳಿ ಆದೇಶ ಪ್ರಶ್ನಿಸಿಸುವುದಾಗಿ ಕರ್ನಾಟಕ ಹೇಳಿದೆ. ಆದರೆ ಈಗಾಗಲೇ ಕರ್ನಾಟಕದ ಎಲ್ಲಾ ವಾದಗಳಿಗೂ ಹಿನ್ನಡೆಯಾಗಿದೆ. ಹೀಗಾಗಿ ನೀರು ನಿಯಂತ್ರಣ ಮಂಡಳಿ ಆದೇಶ ಪ್ರಶ್ನಿಸಿದರೂ ಹೆಚ್ಚಿನ ಪ್ರಯೋಜನವಾಗುವಂತೆ ಕಾಣುತ್ತಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಹೆಜ್ಜೆ ಹೆಜ್ಜೆಗೂ ಹಿನ್ನಡೆಯಾಗುತ್ತಿದೆ. ಕಾವೇರಿ ನದಿ ನೀರು ನಿಯತ್ರಣ ಸಮಿತಿ, ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಳೆ ಕೊರತೆಯಿಂದ ಕಾವೇರಿ ನದಿ ಒಡಲು ಬತ್ತಿದೆ. ಆದರೆ ತಮಿಳುನಾಡು ತನ್ನ ವಾದ ಮಂಡಿಸಿ ಕನ್ನಡಿಗರ ಕುಡಿಯುವ ನೀರನ್ನೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಾವೇರಿ, ಕೃಷ್ಣ, ಮಹದಾಯಿ ನ್ಯಾಯಾಧೀಕರಣ ವಕೀಲರಿಗೆ 122.75 ಕೋಟಿ ಶುಲ್ಕ ಪಾವತಿ