ನಾನೂ ಕರಸೇವಕ; ನನ್ನನ್ನು ಬಂಧಿಸಿ: ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.

I am a karasevak Arrest me  protesting MLA V. Sunil Kumar in police custody at bengaluru rav

ಬೆಂಗಳೂರು (ಜ.4): ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆ ವೇಳೆ ಸುನೀಲ್ ಕುಮಾರ್  ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌ 

ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ.

 ಹಳೇಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆಗೆ ಮುಂದಾಗಿದೆ. 

 

ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶ ಏಕೆ?: ಶಾಸಕ ವೇದವ್ಯಾಸ್‌ ಕಾಮತ್

Latest Videos
Follow Us:
Download App:
  • android
  • ios