ಪರೀಕ್ಷೆ ಎದುರಿಸಲು ನಾನು ಸಿದ್ದನಿದ್ದು, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಮಂಪರು ಪರೀಕ್ಷೆಗೆ ಒಳಪಡಬೇಕು: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ 

ನವದೆಹಲಿ(ಜ.14): ರಾಮಮಂದಿರ ಉದ್ಘಾಟನೆ ವೇಳೆ ಗೋದ್ರಾ ಥರದ ಘಟನೆ ಹೇಳಿಕೆ ವಿಚಾರ ಬಿಜೆಪಿ ನಾಯಕರ ಸವಾಲು ಸ್ವೀಕರಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಂಪರು ಪರೀಕ್ಷೆಗೆ ಒಳಪಡಲು ನಾನು ಸಿದ್ಧ ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಎದುರಿಸಲು ನಾನು ಸಿದ್ಧನಿದ್ದು, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಮಂಪರು ಪರೀಕ್ಷೆಗೆ ಒಳಪಡಬೇಕು ಎಂದು ಹೇಳಿದ್ದಾರೆ.

ಸಂಸತ್‌ ದಾಳಿ ಮಾಸ್ಟರ್‌ಮೈಂಡ್‌ ಮೈಸೂರಿನ ಮನೋರಂಜನ್‌..!

ಬಿಜೆಪಿ ಸರ್ಕಾರ ಇದ್ದಾಗ ₹40,000 ಕೋಟಿ ಹಗರಣ ನಡೆದಿದೆ ಎಂದು ಯತ್ನಾಳ್ ಹೇಳಿದ್ದಾರೆ, ಹೀಗಾಗೀ ನನ್ನ ಮತ್ತು ವಿಜಯೇಂದ್ರ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ. ಆದರೆ, ಮಂಪರು ಪರೀಕ್ಷೆ ಲೈವ್ ಆಗಬೇಕು, ಟಿವಿಯಲ್ಲಿ ಪ್ರಸಾರ ಮಾಡಬೇಕು ಎಂದು ಸವಾಲು ಎಸೆದರು.