ಬೆಂಗಳೂರು :  ಇತ್ತೀಚೆಗೆ ತುಮಕೂರಿನ ಸಿದ್ಧಗಂಗಾ ಶ್ರೀ ದೈವಾಧೀನರಾಗಿರುವುದು ಮತ್ತು ಪುಲ್ವಾಮಾ ಘಟನೆಯಲ್ಲಿ ಯೋಧರು ಹುತ್ಮಾರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

22 ಕ್ಷೇತ್ರ ಬಿಜೆಪಿಗೆ : ಬಿ.ಎಸ್‌. ಯಡಿಯೂರಪ್ಪ ಪ್ರತಿಜ್ಞೆ

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.27ರಂದು ತಮ್ಮ ಹುಟ್ಟುಹಬ್ಬವಿದೆ. ಈ ಬಾರಿ ಆಚರಿಸದಿರಲು ತೀರ್ಮಾನಿಸಿದ್ದೇನೆ. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟುಹಬ್ಬದ ಅಂಗವಾಗಿ ಯಾವುದೇ ಕಾರ್ಯಕ್ರಮ ಮಾಡಿ ಸಿಹಿ ಹಂಚಿ ಸಂಭ್ರಮಿಸಬಾರದು ಎಂದು ಮನವಿ ಮಾಡಿದರು.

ಲೋಕಸಭೆ ಎಲೆಕ್ಷನ್ 2019: ಶ್ರಿರಾಮುಲುಗೆ ಹೊಸ ಟಾಸ್ಕ್ ಕೊಟ್ಟ BSY

ಹುಟ್ಟುಹಬ್ಬದ ದಿನ ತಾವು ಚಿತ್ರದುರ್ಗಕ್ಕೆ ಭೇಟಿ ನೀಡುತ್ತಿದ್ದು, ವಿಶೇಷ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಾಗಿ ಅವರು ಹೇಳಿದರು.