ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೊಪ್ಪಳ (ಡಿ.30): ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕೀಯ ನಾಯಕರನ್ನು ಈ ಮಹಾಕಾರ್ಯಕ್ರಮಕ್ಕೆ ಆಹ್ವಾನಿಸಿದೆ. ಆದರೆ ಇಂದಿನವರೆಗೂ ನನಗೆ ಯಾವುದೇ ಆಹ್ವಾನ ಬಂದಿಲ್ಲ, ಆಹ್ವಾನ ಬಂದ ನಂತರ ಹೋಗಬೇಕೋ ಬೇಡವೋ ಎಂಬ ಬಗ್ಗೆ ಯೋಚಿಸುತ್ತೇನೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನೆಗೆ ಬಂದು ಕರಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ: ಮಾಜಿ ಸಚಿವ ಸುನೀಲ್ ಕುಮಾರ್