ನಕ್ಸಲರ ಶಸ್ತ್ರಾಸ್ತ್ರ ಎಲ್ಲಿದೆ ಅಂತ ಗೊತ್ತು: ಸಿಎಂ ಸಿದ್ದರಾಮಯ್ಯ

ನಕ್ಸಲಿಸಂ ನಮ್ಮ ರಾಜ್ಯದಲ್ಲಿ ಇರಬಾರದು ಎಂಬುದು ನಮ್ಮ ಉದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕು. ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಯಬಾರದು ಎಂಬುದು ನಮ್ಮ ಉದ್ದೇಶ. ಅನ್ಯಾಯ, ಶೋಷಣೆಗಳ ವಿರುದ್ಧ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

I know where the weapons of the Naxals are Says CM Siddaramaiah

ಮೈಸೂರು(ಜ.11):  ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂಬುದು ಗೊತ್ತಿದೆ. ಪೊಲೀಸರು ಮಹಜರ್‌ಮಾಡಿ ಅವುಗಳನ್ನು ತೆಗೆದುಕೊಂಡು ಬರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ನಕ್ಸಲರು ಸಿಎಂ ಕಚೇರಿಯಲ್ಲಿ ಶರಣಾಗಿರುವುದಕ್ಕೆ ಬಿಜೆಪಿಯ ವಿರೋಧ ಕುರಿತು ಪ್ರತಿಕ್ರಿಯಿಸಿ, ನಕ್ಸಲಿಸಂ ನಮ್ಮ ರಾಜ್ಯದಲ್ಲಿ ಇರಬಾರದು ಎಂಬುದು ನಮ್ಮ ಉದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕು. ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಯಬಾರದು ಎಂಬುದು ನಮ್ಮ ಉದ್ದೇಶ. ಅನ್ಯಾಯ, ಶೋಷಣೆಗಳ ವಿರುದ್ಧ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ ಎಂದರು. 

ಶೃಂಗೇರಿಯಲ್ಲಿ ಇನ್ನೊಬ್ಬ ನಕ್ಸಲ್ ಇದ್ದಾನೋ, ಇಲ್ವೋ ನಮಗೆ ಗೊತ್ತಿಲ್ಲ. ಗೊತ್ತಿಲ್ಲ. ಅವನಿಗೂ ನಾನು ಮುಖ್ಯವಾಹಿನಿಗೆ ಬರುವಂತೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಶರಣಾದವರು ರಾಜ್ಯದ ಕೊನೆಯ ನಕ್ಸಲರು: ಗೃಹ ಸಚಿವ ಪರಮೇಶ್ವ‌ರ್

ಬೆಂಗಳೂರು: ಶರಣಾಗತರಾದ ಆರು ನಕ್ಸಲರೇ ರಾಜ್ಯದ ಕೊನೆಯ ನಕ್ಸಲರು. ಇನ್ನು ಹೊರಗಿನಿಂದ ನಮ್ಮಲ್ಲಿಗೆ ನಕ್ಸಲರು ಬಾರದಂತೆ ನಕ್ಸಲ್ ನಿಗ್ರಹ ಪಡೆ ನಿಗಾವಹಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. 
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶರಣಾಗತರಾಗಿರುವ ಗುಂಪಿನವರು ರವೀಂದ್ರ ಎಂಬಾತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಗೊತ್ತಿಲ್ಲ. ನಕ್ಸಲ್ ಚಟುವಟಿಕೆ ಬಗ್ಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ 6 ಜನರೇ ಕೊನೆಯವರು ಎಂದರು. 

ನಕ್ಸಲರಿಗೆ ಪರಿಹಾರ ಮತ್ತು ಪುನರ್‌ವಸತಿ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ಸರ್ಕಾರ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವರು, ಶರಣಾದವರು ಶಸ್ತ್ರಾಸ್ತ್ರ ಗಳನ್ನು ಕಾಡಿನಲ್ಲಿ ಎಲ್ಲಿ ಎಸೆದಿದ್ದಾರೆಂದು ಪೊಲೀಸರು ಪತ್ತೆ ಹಚ್ಚಲಿದ್ದಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಸರ್ಕಾರ ನಡೆಸಿ ದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ? ಎಂದು ತಿರುಗೇಟು ನೀಡಿದರು. 

ಎನ್‌ಕೌಂಟರ್‌ನಲ್ಲಿ ಮೃತ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆ ಪರಿಶೀ ಲಿಸಲಾಗುತ್ತಿದೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಬೇರೆ ಎಂದರು.

Latest Videos
Follow Us:
Download App:
  • android
  • ios