ಸರ್ಕಾರಿ ಆಸ್ಪತ್ರೆ ಮತ್ತು ಶಾಲೆಗಳ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮರೀಚಿಕೆಯಾಗಬಾರದು ಎಂದರು. ‘ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳಿಂದ ಬಡವರಿಗೆ ಸಹಾಯವಾಗಿದೆ: ಪ್ರದೀಪ್ ಈಶ್ವರ್
ವಿಧಾನಸಭೆ(ಜು.13): 'ಉತ್ತಮ ಚಿಕಿತ್ಸೆ ಸಿಗದ ಕಾರಣಕ್ಕಾಗಿ ನನ್ನ ಅಪ್ಪ-ಅಮ್ಮನನ್ನು ಕಳೆದುಕೊಂಡೆ. ಒಂದು ವೇಳೆ ಉತ್ತಮ ಚಿಕಿತ್ಸೆ ಸಿಕ್ಕಿದ್ದರೆ ಇಬ್ಬರಲ್ಲಿ ಒಬ್ಬರನ್ನಾದರೂ ಉಳಿಸಿಕೊಳ್ಳಬಹುದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಘಟಕಗಳನ್ನು ಮೇಲ್ದರ್ಜೆಗೇರಿಸುವ ಅತ್ಯಗತ್ಯ ಇದೆ’ ಎಂದು ಕಾಂಗ್ರೆಸ್ ಸದಸ್ಯ ಪ್ರದೀಪ್ ಈಶ್ವರ್ ಒತ್ತಾಯಿಸಿದ್ದಾರೆ.
ಬುಧವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಮತ್ತು ಶಾಲೆಗಳ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮರೀಚಿಕೆಯಾಗಬಾರದು ಎಂದರು. ‘ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳಿಂದ ಬಡವರಿಗೆ ಸಹಾಯವಾಗಿದೆ. ಅನ್ಯಭಾಗ್ಯ ಶ್ರೀಮಂತರ ದೃಷ್ಟಿಯಿಂದ ರೇಷನ್ ಅಷ್ಟೇ. ಆದರೆ, ನನ್ನಂಥವನ ದೃಷ್ಟಿಯಲ್ಲಿ ಅನ್ನ ಎನ್ನುವುದು ದೇವರು. ಗೃಹಜ್ಯೋತಿ ಯೋಜನೆ ಕೋಟ್ಯಂತರ ಮಕ್ಕಳ ಬದುಕನ್ನು ರೂಪಿಸುತ್ತದೆ. ವಿದ್ಯುತ್ ಬಿಲ್ ಹೆಚ್ಚಾಗಿ ಬರಲಿದೆ ಎಂಬ ಕಾರಣಕ್ಕಾಗಿ ಬೇಗ ವಿದ್ಯುತ್ ತೆಗೆಯುವ ಬದಲು ತಡರಾತ್ರಿಯವರೆಗೆ ಓದಲು ಸಹಕಾರಿಯಾಗಿದೆ’ ಎಂದರು.
ಸಾವಾಗಿಲ್ಲ ಮಾರ್ರೆ ವೀಡಿಯೋ ಟ್ರೋಲ್: ಖಡಕ್ ತಿರುಗೇಟು ಕೊಟ್ಟ ಶಾಸಕಿ ನಯನಾ ಮೋಟಮ್ಮ
‘ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಬಡ, ಮಧ್ಯಮ ವರ್ಗದವರು ಹೋಗುತ್ತಾರೆ. ಅವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗಬೇಕಿದೆ. ಉತ್ತಮ ಚಿಕಿತ್ಸೆ ಸಿಗದೆ ನಾನು ಅಪ್ಪ-ಅಮ್ಮನನ್ನು ಕಳೆದುಕೊಂಡೆ. ಈ ಸ್ಥಿತಿ ಯಾರಿಗೂ ಬರಬಾರದು. ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಘಟಕಗಳನ್ನು ಹೆಚ್ಚಿಸುವುದರ ಜತೆಗೆ ಅತ್ಯುತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು. ಇದರ ಜತೆಗೆ ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೈದ್ಯಕೀಯ ಸೇರಿದಂತೆ ಉನ್ನತ ವಿದ್ಯಾಭ್ಯಾಸ ಮಾಡುವ ಕನ್ನಡದ ಮಾಧ್ಯಮದ ವಿದ್ಯಾರ್ಥಿಗಳನ್ನು ಆದ್ಯತೆ ಮೇಲೆ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ’ ಎಂದು ಪ್ರತಿಪಾದಿಸಿದರು.
