ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಘಟನೆಗೆ ಕಾರಣ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ತನಿಖೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಅಲ್ಲದೆ, ಶಿವಮೊಗ್ಗ ಘಟನೆಯನ್ನು ಸಣ್ಣದು ಎಂದಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ.
ಬೆಂಗಳೂರು (ಅ.4): ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಘಟನೆಗೆ ಕಾರಣ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ತನಿಖೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಅಲ್ಲದೆ, ಶಿವಮೊಗ್ಗ ಘಟನೆಯನ್ನು ಸಣ್ಣದು ಎಂದಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಹಿನ್ನೆಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಶಿವಮೊಗ್ಗಕ್ಕೆ ಕಳಿಸಿದ್ದೆವು. ಎರಡೂ ಕಡೆಯಿಂದಲೂ ಕಲ್ಲು ಹೊಡೆದಿದ್ದಾರೆ. ಕೆಲವರ ಬಂಧನ ಆಗಿದೆ, ತನಿಖೆ ನಡೆಯುತ್ತಿದೆ ಎಂದರು.
ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ಗೆ ಡಿಕೆಶಿ ಪತ್ರ, ಯಾರೇ ಲೆಟರ್ ಬರೆದ್ರೂ ವಾಪಸ್ ತೆಗೆದುಕೊಳ್ಳಲ್ಲ: ಸಚಿವ ಪರಂ
ಹೇಳಿಕೆ ತಿರುಚಲಾಗಿದೆ: ಶಿವಮೊಗ್ಗದಲ್ಲಿ ನಡೆದಿದ್ದು ಸಣ್ಣ ಘಟನೆ ಎಂಬ ಹೇಳಿಕೆಗೆ ಬಿಜೆಪಿ ನಾಯಕರ ಟೀಕೆಯ ಬಗ್ಗೆ ತಿರುಗೇಟು ನೀಡಿದ ಅವರು, ಬಿಜೆಪಿಯವರು ಅಧಿಕಾರ ಕಳೆದುಕೊಂಡು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಹಿಂದೆಲ್ಲಾ ಇಂತಹ ಘಟನೆಗಳು ಶಿವಮೊಗ್ಗದಲ್ಲಿ ಆಗಿರಲಿಲ್ವಾ? ನಾನು ಸಣ್ಣ ಘಟನೆ ಎಂದು ಹೇಳಿದ್ದು, ಘಟನೆ ಸಣ್ಣದು ಎಂದಲ್ಲ, ದೊಡ್ಡ ಅನಾಹುತ ನಡೆಯಬೇಕಿದ್ದನ್ನು ಪೊಲೀಸರು ತಡೆದಿದ್ರಿಂದ ಸಣ್ಣ ಘಟನೆಯಾಗಿದೆ ಎಂದು ಹೇಳಿದ್ದು. ಇದನ್ನೇ ಬಿಜೆಪಿಯವರು ತಿರುಚಿ ಬೇಜವಾಬ್ದಾರಿ ಹೇಳಿಕೆ ಅನ್ನುತ್ತಿದ್ದಾರೆ ಎಂದರು
ಶಿವಮೊಗ್ಗದಲ್ಲಿ ಗಲಭೆಗೆ ಆಗುವ ಮುನ್ನವೇ ನಾವು ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದೆವು: ಸಚಿವ ಪರಮೇಶ್ವರ್
