Asianet Suvarna News Asianet Suvarna News

ಪ್ರವಾಸಿ ಗೈಡ್‌ಗಳಿಗೆ ಗುರುತಿನ ಚೀಟಿ - ಆನಂದ್‌ಸಿಂಗ್‌

  • ರಾಜ್ಯದ ಪಾರಂಪರಿಕ ಹಾಗೂ ಪ್ರವಾಸಿ ಸ್ಥಳಗಳಲ್ಲಿರುವ ಪ್ರವಾಸಿ ಗೈಡ್‌ಗಳಿಗೆ (ಮಾರ್ಗದರ್ಶಿ) ಕೂಡಲೇ ಗುರುತಿನ  ಚೀಟಿ 
  • ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಆನಂದ್‌ ಸಿಂಗ್‌ ಅಧಿಕಾರಿಗಳಿಗೆ ತಾಕೀತು 
ID Card for tourist guides says minister anand singh snr
Author
Bengaluru, First Published Oct 28, 2021, 8:03 AM IST
  • Facebook
  • Twitter
  • Whatsapp

ಬೆಂಗಳೂರು (ಅ.28):  ರಾಜ್ಯದ ಪಾರಂಪರಿಕ ಹಾಗೂ ಪ್ರವಾಸಿ ಸ್ಥಳಗಳಲ್ಲಿರುವ (tourist place) ಪ್ರವಾಸಿ ಗೈಡ್‌ಗಳಿಗೆ ( Tourist Guide) ಕೂಡಲೇ ಗುರುತಿನ  ಚೀಟಿ ವಿತರಣೆ ಮಾಡುವಂತೆ ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಆನಂದ್‌ ಸಿಂಗ್‌ (Anand Singh) ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ದಕ್ಷಿಣ ರಾಜ್ಯಗಳ (South States) ಪ್ರವಾಸೋದ್ಯಮ ಸಚಿವರ ಸಮ್ಮೇಳನದ ಹಿನ್ನೆಲೆಯಲ್ಲಿ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಉದಯವಾಯ್ತು ವಿಜಯನಗರ: ಕಲರ್ ಫುಲ್ ಚಿತ್ರಗಳು

ಪ್ರವಾಸಿ ಮಾರ್ಗದರ್ಶಿಗಳ ಗುರುತಿನ ಚೀಟಿ ವಿತರಣೆ ಹಾಗೂ ನವೀಕರಣ ಆಗದ ಬಗ್ಗೆ ಪ್ರವಾಸಿ ಮಾರ್ಗದರ್ಶಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ನಿತ್ಯ ಹಂಪಿಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಗುರುತಿನ ಚೀಟಿ ಇಲ್ಲದೇ, ಅವರು ಪ್ರವಾಸಿಗರನ್ನು ಹೇಗೆ ಪರಿಚಯಿಸಿಕೊಂಡು ಅವರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಕೂಡಲೇ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಪ್ರವಾಸಿ ಮಾರ್ಗದರ್ಶಿಗಳಿಗೆ ತರಬೇತಿ ಹಾಗೂ ಸಮವಸ್ತ್ರ ನೀಡುವ ಬಗ್ಗೆ, ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ಸಚಿವ ಸಮ್ಮೇಳನದ ಬಗ್ಗೆಯೂ ಅಧಿಕಾರಿಗಳ ಜತೆ ಸಚಿವರು ಚರ್ಚೆ ನಡೆಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ (Tourism Department) ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ… ಶರ್ಮಾ, ಜೆಎಲ್‌ಆರ್‌ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ಕುಮಾರ್‌, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ.ರೂಪೇಶ್‌ ಮತ್ತಿತರ ಅಧಿಕಾಗಳಿದ್ದರು.

ಬಂಪರ್ ಗಿಫ್ಟ್
2025ರ ವೇಳೆಗೆ ಕರ್ನಾಟಕವು ಪ್ರವಾಸೋದ್ಯಮ (Karnataka toirism) ಕ್ಷೇತ್ರದಲ್ಲಿ ಅತ್ಯುತ್ತಮ ಸ್ಥಾನ ಹೊಂದುವ ಗುರಿ ಸಾಧಿಸಲು ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅನ್ನು ರೂಪಿಸಲಾಗಿದ್ದು, ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು ಸರ್ಕಾರವು 500 ಕೋಟಿ ರು. ಕಾಯ್ದಿರಿಸಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ (Anand Singh) ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನೀತಿಯು ಐದು ಸಾವಿರ ಕೋಟಿ ರು.ನಷ್ಟುಹೂಡಿಕೆ ಮತ್ತು ಒಂದು ಮಿಲಿಯನ್‌ ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. 17 ಸಾವಿರಕ್ಕೂ ಹೆಚ್ಚು ಪ್ರವಾಸೋದ್ಯಮ ಯೋಜನೆಗಳು ಮತ್ತು ಸೇವೆಗಳು ನೀತಿಯ ಲಾಭವನ್ನು ಪಡೆಯಲಿವೆ. ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಉತ್ಪನ್ನ ಕೊಡುಗೆಗಳು, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ ಪ್ರಚಾರದ ಅಂಶಗಳ ಮೇಲೆ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ ಯೋಜನೆಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸಲು ಪ್ರವಾಸೋದ್ಯಮ ಹೂಡಿಕೆ ಸೌಲಭ್ಯದ ಕೋಶವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಎಕ್ಸ್‌ಪೋ:

ಮುಂದಿನ ವರ್ಷ ಫೆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ಪ್ರವಾಸೋದ್ಯಮ ಎಕ್ಸ್‌ಪೋ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಕೋವಿಡ್‌ (Covid) ಎರಡನೇ ಅಲೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಹೊಟೇಲ್‌ (Hotel) ಉದ್ಯಮ, ಗೈಡ್‌ಗಳು, ಸಿನಿಮಾ ಕ್ಷೇತ್ರ ಸೇರಿದಂತೆ ಇತರರಿಗೆ ಸರ್ಕಾರವು ಅಗತ್ಯ ನೆರವು ನೀಡಲು ಸಿದ್ಧವಿದೆ. ಸಿನಿಮಾ ರಂಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಏಕಗವಾಕ್ಷಿ ಪದ್ಧತಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ, ಅರಣ್ಯ ವಸತಿ ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಸರ್ಕಾರದ ಕಾರ್ಯದರ್ಶಿ ಪಂಕಜ್‌ಕುಮಾರ್‌ ಪಾಂಡೆ ಇತರರು ಉಪಸ್ಥಿತರಿದ್ದರು.

Follow Us:
Download App:
  • android
  • ios