ಇದ್ರೀಶ್ ಪಾಷಾ ಸಾವು ಪ್ರಕರಣ: ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ ಜಾಮೀನು

ಜಾನುವಾರು ಸಾಗಾಟದ ಸಂದರ್ಭದಲ್ಲಿ ಇದ್ರೀಶ್‌ ಪಾಷಾ ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಚ್‌ ಷರತ್ತುಬದ್ಧ ಜಾಮೀನು ನೀಡಿದೆ.

Idris Pasha murder case Bail to Puneeth Kerehalli hihgcourt of karnataka rav

ಬೆಂಗಳೂರು (ಮೇ.17) : ಜಾನುವಾರು ಸಾಗಾಟದ ಸಂದರ್ಭದಲ್ಲಿ ಇದ್ರೀಶ್‌ ಪಾಷಾ ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಪ್ರಕರಣದಲ್ಲಿ ಆರೋಪಿಗಳಾದ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ(Puneeth kerehalli), ಗೋಪಿ, ಸುರೇಶ್‌, ಎ.ಎನ್‌. ಪವನ್‌ಕುಮಾರ್‌, ಪಿ.ಲಿಂಗಪ್ಪ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠ ಈ ಆದೇಶ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಪ್ರಕಟವಾಗಬೇಕಿದೆ. ಅರ್ಜಿದಾರ ಪರ ಹಿರಿಯ ವಕೀಲ ಅರುಣ ಶ್ಯಾಮ್‌, ‘ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್‌ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದೆ. ಆದರೆ, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಈಗ ತನಿಖೆ ಪೂರ್ಣಗೊಂಡಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದ್ದರು.

ಗೋ ಸಾಗಣೆ ವ್ಯಕ್ತಿ ಸಾವು: ಪುನೀತ್‌ ಕೆರೆಹಳ್ಳಿ ಅಂಡ್‌ ಟೀಮ್‌ಗೆ 7 ದಿನ ಪೊಲೀಸ್‌ ಕಸ್ಟಡಿ

ಏನಿದು ಪ್ರಕರಣ?:

2023ರ ಮಾ.31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ(Satanur police station) ಸಮೀಪ ಪುನೀತ್‌ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ಅಡ್ಡಗಟ್ಟಿದ್ದರು. ಅಕ್ರಮವಾಗಿ ಜಾನುವಾರು ಸಾಗಣೆ ಮಾಡಲಾಗುತ್ತಿದೆ ಎಂದು ವಾಹನದಲ್ಲಿ ಇದ್ರೀಶ್‌ ಪಾಷಾ(Idris Pasha) ಹಾಗೂ ಇತರರ ಮೇಲೆ ಹಲ್ಲೆ ನಡೆಸಿದ್ದರು. ಏ.1ರಂದು ಬೆಳಿಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್‌ ಠಾಣೆಯಿಂದ 100 ಮೀಟರ್‌ ದೂರದಲ್ಲಿ ಇದ್ರೀಶ್‌ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್‌ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನುಸ್‌ ಪಾಷಾ ದೂರು ನೀಡಿದ್ದರು. ಇದನ್ನು ಆಧರಿಸಿ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದ ಸಾತನೂರು ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಗೋ ರಕ್ಷಣೆ ಮಾಡ್ತೀನಿ ಅಂತ ಹೆಣ ಬೀಳಿಸಿದನಾ ಪುನೀತ್ ಕೆರೆಹಳ್ಳಿ? ರಾಜಸ್ಥಾನದಲ್ಲಿ ಸಿಕ್ಕಿಬಿದ್ದ ಕಥೆ ಗೊತ್ತಾ..?

Latest Videos
Follow Us:
Download App:
  • android
  • ios